ನಾಳೆ ಪ್ರಧಾನಮಂತ್ರಿ "ಸೂರ್ಯ ಘರ್" ಮಾಹಿತಿ ಕಾರ್ಯಾಗಾರ

Upayuktha
0


ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಮತ್ತು ಮಂಗಳೂರು ಮಹಾನಗರಪಾಲಿಕೆ ಸಹಯೋಗದೊಂದಿಗೆ ಪ್ರಧಾನಮಂತ್ರಿ "ಸೂರ್ಯ ಘರ್" ಮುಫ್ತ್ ಬಿಜ್ಲಿ ಯೋಜನೆಯ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಜ.2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.


ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ವಿ. ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಕೇಂದ್ರ ಇಂಧನ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಯಕ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹಾಗೂ ರಾಜ್ಯ ಇಂಧನ ಸಚಿವ ಕೆ.ಜೆ ಜಾರ್ಜ್, ಜಿಲ್ಲೆಯ ಸಂಸದರು, ಶಾಸಕರು, ಇ೦ಧನ ಇಲಾಖೆ ಅಪರ ಮುಖ್ಯ ಕಾಯ೯ದಶಿ೯ ಗೌರವ ಗುಪ್ತ, ಮುಖ್ಯಮ೦ತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಮೆಸ್ಕಾಂ ಅಧ್ಯಕ್ಷ ಪ೦ಕಜ್‌ ಕುಮಾರ್‌ ಪಾ೦ಡೆ ಉಪಸ್ಥಿತರಿರುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top