ವಿವೇಕಾನಂದ ಪಿಯು ಕಾಲೇಜಿನಲ್ಲಿ ವಾಣಿಜ್ಯ, ಕಲಾ ವಿಭಾಗದ ಪೋಷಕರ ಸಭೆ

Upayuktha
0


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ನೇತಾಜಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಂಬರುವ ಪರೀಕ್ಷೆಗಳ ವಿವರ, ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳನ್ನು ಪೋಷಕರ ಜತೆ ಚರ್ಚಿಸುವ ಹಿನ್ನಲೆಯಲ್ಲಿ ನಡೆಸಲಾದ ಈ ಸಭೆಯಲ್ಲಿ ಪ್ರಥಮ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಹಾಗೂ ನಿಯಮಾವಳಿಗಳ ಬಗ್ಗೆ ವಿವರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನೀಡಲಾಯಿತು. 


ವಾಣಿಜ್ಯ ವಿಭಾಗದ ಮುಖ್ಯಸ್ಥ ದೇವಿಪ್ರಸಾದ್‌ ಇವರು ಪರೀಕ್ಷಾ ತಯಾರಿಯ ಕುರಿತು, ಪ್ರಶ್ನೆ ಪತ್ರಿಕಾ ಮಾದರಿಯಲ್ಲಿನ ಬದಲಾವಣೆಗಳು, ನಿಧಾನ ಕಲಿಕೆಯ ವಿದ್ಯಾರ್ಥಿಗಳಿಗಾಗಿ ಪರಿಹಾರ ಬೋಧನೆಯ ತರಗತಿಗಳು ಹಾಗೂ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಮಾಹಿತಿ ನೀಡಿದರು. ಜತೆಗೆ ಸಿ.ಎ ಆಕಾಂಕ್ಷಿ ವಿದ್ಯಾರ್ಥಿಗಳಿಗಾಗಿ ನಡೆಯುವ ಸಿ.ಎ ತರಗತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಿಳಿಸಿದರು. ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲ ಎಂ. ದೇವಿಚರಣ್‌ ರೈ ಅವರು ಮುಂಬರುವ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಕುರಿತಾಗಿ ವಿವರವಾಗಿ  ಹೇಳಿದರು. 


ಕಾರ್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ಹಾಗೂ ಕಲಾ ವಿಭಾಗದ ತರಗತಿಗಳ ಶೈಕ್ಷಣಿಕ ಸಲಹೆಗಾರರು, ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು. ಆಂಗ್ಲಭಾಷಾ ಉಪನ್ಯಾಸಕರಾದ ಪಿ.ಕೆ ಪರಮೇಶ್ವರ ಶರ್ಮ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ್‌ ಶೆಟ್ಟಿಗಾರ್‌ ವಂದಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಂಗ್ಲಭಾಷಾ ವಿಭಾಗದ ಉಪನ್ಯಾಸಕಿ ರೇಷ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top