ಪಣಜಿ: ಗೋವಾ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ದಾಮು ನಾಯ್ಕ ರವರನ್ನು ಕರ್ನಾಟಕ ರಕ್ಷಣಾ ವೇದಿಕೆ ಗೋವಾ (ಪ್ರವೀಣಕುಮಾರ್ ಶೆಟ್ಟಿ ಬಣ) ಸಂಘಟನೆಯ ವತಿಯಿಂದ ಭಾನುವಾರ ಭೇಟಿ ಮಾಡಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗೋವಾದಲ್ಲಿ ಬಸವೇಶ್ವರ ಮೂರ್ತಿ ಸ್ಥಾಪನೆ ಹಾಗೂ ಗೋವಾದಲ್ಲಿರುವ ಕನ್ನಡಿಗರಿಗೆ ಹೆಚ್ಚಿನ ಅನುಲೂಕವಾಗುವ ನಿಟ್ಟಿನಲ್ಲಿ ವಾಸ್ಕೊ ಸೊಲ್ಲಾಪುರ ರೈಲು ಓಡಾಟ ಆರಂಭಿಸುವಂತೆ, ಬಿಜೆಪಿ ಮಂಡಲ ಮತ್ತು ಜಿಲ್ಲಾ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕನ್ನಡಿಗರನ್ನು ಸೇರ್ಪಡೆ ಮಾಡಿಕೊಳ್ಳುವಂತೆ ಮನವಿ ಮಾಡಲಾಯಿತು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯಾಧ್ಯಕ್ಷ ಮಂಜುನಾಥ ನಾಟೀಕರ್ ಮಾಹಿತಿ ನೀಡಿದರು.
ಗೋವಾದಲ್ಲಿರುವ ಕನ್ನಡಿಗರ ಅನುಕೂಲಕ್ಕಾಗಿ ಶೀಘ್ರವೇ ಈ ಎಲ್ಲ ಮನವಿಯನ್ನು ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ದಾಮು ನಾಯ್ಕ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯಾಧ್ಯಕ್ಷ ಮಂಜುನಾಥ ನಾಟೀಕರ್, ಸಂಘಟನಾ ಅಧ್ಯಕ್ಷ ರಮೆಶ್ ಮಾದರ್, ಸಹ ಕಾರ್ಯದರ್ಶಿ ಶಿವು ತಲವಾರ್, ಸಂಚಾಲಕರಾದ ಕರಿಯಪ್ಪ ಮುಟಗಿ, ಕಾರ್ಯಕಾರಿ ಸಮೀತಿಯ ಸದಸ್ಯರಾದ ಬಸವರಾಜ ಮುರ್ನಾಳ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ