ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಗೆ ಶೇ.100 ಫಲಿತಾಂಶ

Chandrashekhara Kulamarva
0

 



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಗೆ ಬೆಂಗಳೂರಿನ ಕರ್ನಾಟಕ ಪೌಢ್ರ ಶಿಕ್ಷಣ ಮಂಡಳಿ ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. 


ಪರೀಕ್ಷೆ ಬರೆದಿದ್ದ ಒಟ್ಟು 34 ಮಂದಿ ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 


ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕಿಯಾದ ಜಯಲಕ್ಷೀ ಇವರು ತರಬೇತಿ ನೀಡಿದ್ದಾರೆ. ನವೆಂಬರ್ 20, 21, 22 ರಂದು ಪುತ್ತೂರಿನ ಫಿಲೋಮಿನ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. 



إرسال تعليق

0 تعليقات
إرسال تعليق (0)
To Top