ಪುತ್ತೂರು: ಕರ್ನಾಟಕ ಸರ್ಕಾರ, ರಾಜ್ಯ ಚುನಾವಣಾ ಆಯೋಗ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು, ಶಕ್ತಿನಗರ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ 'ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ' ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅಪೂರ್ವ ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರು ಕಾವು ನಿವಾಸಿ ವಸಂತ ಸಾಲ್ವಂಕರ್ ಮತ್ತು ಅರುಣಾ ಪಿ.ಕೆ ದಂಪತಿಗಳ ಪುತ್ರಿ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ರಾಜ್ಯಶಾಸ್ತ್ರ ವಿಭಾಗದ ಭರತ್ ಕುಮಾರ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ