ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತಿ ಮಾರ್ಗದರ್ಶನ' ತರಬೇತಿ

Upayuktha
0




ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ಜ8 ರಂದು  ಕಾಲೇಜು ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ 'ವೃತಿ ಮಾರ್ಗದರ್ಶನ' ತರಬೇತಿಯು ನಡೆಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ನಿಟ್ಟೆ ವಿಶ್ವವಿದ್ಯಾನಿಲಯದ ಮಾರ್ಕೆಟಿಂಗ್ ಮ್ಯಾನೇಜರ್ ಆಗಿರುವ ವಿವೇಕ್ ರಂಜನ್ ಭಂಡಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ  ವೃತ್ತಿ ಮಾರ್ಗದರ್ಶನ ಕಾರ್ಯಗಾರಗಳ ಅವಶ್ಯಕತೆಯಿದ್ದು, ಇಂದು ತಮ್ಮ ಮುಂದೆ ಹಲವಾರು ಆಯ್ಕೆಗಳಿದ್ದು, ವಿದ್ಯಾರ್ಥಿಗಳಾದ ತಾವು ಆಸಕ್ತಿ ಹಾಗೂ ಅವಕಾಶಗಳನ್ನು ನೋಡಿಕೊಂಡು ಉತ್ತಮ ಆಯ್ಕೆಯನ್ನು ಮಾಡಬೇಕಾಗಿದೆ. 


ದ್ವಿತೀಯ ಪಿಯುಸಿ ಪರೀಕ್ಷೆಗಳ ನಂತರ ವಿದ್ಯಾರ್ಥಿಗಳಿಗೆ ಮುಂದಿನ ಕೋರ್ಸುಗಳ ಆಯ್ಕೆಯ ಒತ್ತಡ ಹೆಚ್ಚಾಗುವುದರ ಜೊತೆಗೆ  ನೆರೆಹೊರೆಯವರು ಅಥವಾ ಬಂಧುಮಿತ್ರರ ಒತ್ತಡವೂ ಸೇರಿಕೊಳ್ಳುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಈಗಲೇ ತಮ್ಮ ಆಯ್ಕೆಗಳ ಬಗ್ಗೆ ಚಿಂತನೆ ಮಾಡುವುದು ಉತ್ತಮ. ಇಂದಿನ ಡಿಜಿಟಲ್ ಯುಗದಲ್ಲಿ  ಉತ್ತಮ ಅವಕಾಶಗಳು ಲಭ್ಯವಿದ್ದು, ಪಿಯುಸಿ ನಂತರದ ಅವಕಾಶಗಳ ಬಗ್ಗೆ ವಿಸ್ತೃತವಾಗಿ ಮಾಹಿತಿಯನ್ನು ನೀಡಿದರು.


ಮುಖ್ಯವಾಗಿ ವೈದ್ಯಕೀಯ, ಇಂಜಿನಿಯರಿಂಗ್, ಮೂಲವಿಜ್ಞಾನ, ಪ್ಯಾರ ಮೆಡಿಕಲ್, ನರ್ಸಿಂಗ್, ಫಾರ್ಮಸಿ ಮುಂತಾದ ಕೋರ್ಸುಗಳ ಬಗ್ಗೆ ಮಾಹಿತಿ ಮತ್ತು ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ, ಉತ್ತಮ ಆಯ್ಕೆಯೊಂದಿಗೆ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ತಾವುಗಳು ಪಿ.ಯು. ಸಿ ಅಧ್ಯಯನದ ಅಂತಿಮ ಘಟ್ಟದಲ್ಲಿದ್ದು , ಕೇವಲ ಪರೀಕ್ಷೆಗಳಷ್ಟೇ ಉಳಿದುಕೊಂಡಿವೆ.


ಸಾಕಷ್ಟು ವಿದ್ಯಾರ್ಥಿಗಳಿಗೆ ತಮ್ಮ ಮುಂದೆ ಇರುವ ಅವಕಾಶಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಇರಬಹುದು. ಪದವಿ ಪೂರ್ವ ಶಿಕ್ಷಣದ ನಂತರ ತಮಗೆ ಇರುವ ಆಯ್ಕೆಗಳ ಕುರಿತಾಗಿ ತಿಳಿದುಕೊಳ್ಳಲು ಈ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, 


ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುದಷ್ಟೇ ಅಲ್ಲದೆ ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಜೀವನದ ಯಶಸ್ಸು ನಿಮಗೆ ಸಿಗಲಿ ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್, ರೋಹಿತ್ ಕುಮಾರ್, ಹರ್ಷಿತ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಲಿಶೋನ್ ಮಿರಾಂಡಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಜೇನಿಶಾ ಹನ್ನ ಕ್ರಾಸ್ಟ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top