ವಿವೇಕಾನಂದ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Upayuktha
0




ಪುತ್ತೂರು: ಕಳೆದ ಎಪ್ಪತ್ತಾರು ವರ್ಷಗಳಲ್ಲಿ ನಮ್ಮ ದೇಶ ಸಾಗಿ ಬಂದುದುರ ಬಗೆಗೆ ನಾವಿಂದು ವಿಶ್ಲೇಷಣೆ ಮಾಡಬೇಕಾದ ಸಮಯವಿದು. ನಮ್ಮ ದೇಶ ಅತ್ಯಂತ ವಿಶಿಷ್ಟವಾದ ದೇಶ.ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ದೇಶವಾದರೂ ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಮುಂದುವರೆದಿದದ್ದೇವೆ. ಅನೇಕ ವಿಚಾರಗಳಲ್ಲಿ ದೇಶ ತನ್ನದೇ ಆದ ರೀತಿಯಲ್ಲಿ ಗುರುತಿಸಿಕೊಂಡಿದೆ. ಕೃಷಿ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿದುದು ಅಲ್ಲದೇ ತಂತ್ರಜ್ಞಾನ, ಕೈಗಾರಿಕಾ ಕ್ಷೇತ್ರದಲ್ಲಿಯೂ ಅಭಿವೃದ್ಧಿಯನ್ನು ಸಾಧಿಸಿಕೊಂಡು  ಬಂದಿದೆ. 


ಆದರೆ ದೇಶ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶ ಇಂದು ಸಾಮಾಜಿಕ ತೊಡಕುಗಳಿಂದ ಮುಕ್ತವಾಗಬೇಕಿದೆ. ನಾವಿಂದು ಶಿಸ್ತನ್ನು ಅಳವಡಿಸಿಕೊಂಡು ಸಾಮಾಜಿಕವಾಗಿ ತೊಡಗಿಸಿ ಕೊಳ್ಳ ಬೇಕಾಗಿದೆ ಹಾಗೂ ಆಡಳಿತದಲ್ಲಿ ಪ್ರಜಾಸತ್ತಾತ್ಮಕವಾದ ಧೋರಣೆ ಇರಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಅಭಿಪ್ರಾಯಪಟ್ಟರು.


ಇವರು ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ ನಡೆದ ಎಪ್ಪತ್ತಾರನೇಯ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣಗೈದು ಮಾತನಾಡಿದರು.


ಈ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು, ವಿವೇಕಾನಂದ ಸಿಬಿಎಸ್ ಸಿ ಸಂಸ್ಥೆ ಹಾಗೂ  ಫಾರ್ಮಸಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.


ಕಾಲೇಜಿನ ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಭಾಗವಹಿಸಿದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ನಿರ್ವಹಿಸಿದರು.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top