ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ: ಬಿಜೆಪಿ ಶಾಸಕ ಭರತ್‌ ಶೆಟ್ಟಿ

Upayuktha
0



ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆಯಲ್ಲಿ ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್‌ ಶೆಟ್ಟಿ ಆರೋಪಿಸಿದ್ದಾರೆ.


ಪತ್ರಕರ್ತರ ಜೊತೆ ಮಾತನಾಡಿದ ಅವರು, ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ. ದರೋಡೆ ಪ್ರಕರಣದಲ್ಲಿ ಶೇ. 100ರಷ್ಟು ಸ್ಥಳೀಯರು ಇರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದರು.


ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ಈ ಕೃತ್ಯಕ್ಕೆ ಸಹಕಾರ ನೀಡಿದ ನೈಜ ಆರೋಪಿಗಳನ್ನು ಬಯಲಿಗೆ ತನ್ನಿ ಎಂದು ಭರತ್‌ ಶೆಟ್ಟಿ ಸರ್ಕಾರಕ್ಕೆ ಸವಾಲು ಹಾಕಿದರು.


ದರೋಡೆಕೋರರನ್ನು ಈಗ ಬಂಧಿಸಲಾಗಿದೆ. ಆದರೆ ಅದಕ್ಕೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ದೂರಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top