ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸಾವಿಷ್ಕಾರ್- 2024 ವಾರ್ಷಿಕೋತ್ಸವ

Upayuktha
0


ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸಾವಿಷ್ಕಾರ್- 2024 ವಾರ್ಷಿಕೋತ್ಸವ ಸಮಾರಂಭ ನಡೆಯಿತು.


ಮಂಗಳೂರು ಕಾಕುಂಜೆ ಗ್ರೂಪ್ ಆಫ್ ಕಂಪೆನೀಸ್ ನಿರ್ದೇಶಕ ಮಿಥುನ್ ಭಟ್ ಕಾಕುಂಜೆ ಇವರು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಆದರ್ಶ ವ್ಯಕ್ತಿಗಳನ್ನು ಗಮನಿಸಬೇಕು. ಪರಿಣಾಮವಾಗಿ ಜೀವನದಲ್ಲಿ ಗುರಿಯನ್ನು ಸಾಧಿಸಲು ಸುಲಭವಾಗುತ್ತದೆ ಎಂದರು.

 

ಸಮಾರಂಭದ ಅಧ್ಯಕ್ಷತೆ ವಹಿಸಿದ ಮಂಗಳೂರಿನ ಶ್ರೀಶ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಎಂ. ಎಸ್ ಗುರುರಾಜ್ ಅವರು ಮಾತನಾಡಿ, ಈ ಸಂಸ್ಥೆಯು ಅತ್ಯುತ್ತಮ ಸೌಲಭ್ಯ‌ಗಳನ್ನು ಹೊಂದಿದೆ. ಇಲ್ಲಿರುವ ಮಕ್ಕಳ ಹೆತ್ತವರು ಭಾಗ್ಯವಂತರು. ಈ ಸೌಲಭ್ಯಗಳನ್ನು ಇನ್ನಷ್ಟು ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು ಎಂದರು.


ಶಿಕ್ಷಕ - ರಕ್ಷಕ ಸಂಘದ ಅಧ್ಯಕ್ಷ ರಾಜಗೋಪಾಲ್ ಅವರು ಮಾತನಾಡಿ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಒಳ್ಳೆಯ ಮಾರ್ಗದರ್ಶನವನ್ನು ನೀಡುವ ಸಂಸ್ಥೆಯಾಗಿದೆ. ಇದು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.


ಸೇವಾಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಮೋಹನ್ ಕಾಶಿಮಠ, ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮತ್ತು ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ದುರ್ಗಾವತಿ ಮತ್ತಿತರರು ಉಪಸ್ಥಿತರಿದ್ದರು.


ಸಂಸ್ಥೆಯ ನಿರ್ದೇಶಕ ಗಿರೀಶ್ ಎಮ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಂಶುಪಾಲರಾದ ಗಂಗಾರತ್ನ ಸಂಸ್ಥೆಯ ವಾರ್ಷಿಕ ವರದಿ ಮಂಥನವನ್ನು ವಾಚಿಸಿದರು.

 

ಈ ಸಂದರ್ಭದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರೊಂದಿಗೆ ಅರ್ಹ ವಿದ್ಯಾರ್ಥಿಗಳಿಗೆ ದತ್ತಿನಿಧಿ ಸಹಾಯಧನದ ಸೌಲಭ್ಯವನ್ನೂ ನೀಡಲಾಯಿತು.


ಉಪನ್ಯಾಸಕಿ ವೀಣಾ ಸ್ವಾಗತಿಸಿ, ನಿತಿನ್ ಕುಮಾರ್ ವಂದಿಸಿದರು. ರೋಷನ್ ಕುಮಾರ್, ಗಾಯತ್ರೀ ಶ್ರೀನಿವಾಸ್, ಸಂಗೀತಾ ಅತಿಥಿಗಳ ಪರಿಚಯ ಮಾಡಿದರು.


ವಿದ್ಯಾರ್ಥಿಗಳಿಗೆ ನಡೆಸಿದ ವೈವಿಧ್ಯಮಯ ಸ್ಪರ್ಧೆಗಳಲ್ಲಿ ವಿಜೇತರ ಪಟ್ಟಿಗಳನ್ನು ಉಪನ್ಯಾಸಕಿಯರಾದ ಅಕ್ಷತಾ, ಸ್ವಾತಿ, ಶ್ರುತಿ, ಸಮೃದ್ಧಿ, ಮೇಘನಾ, ಗಾಯತ್ರೀ ಎನ್. ಎಸ್, ಶೋಭಾ ವಾಚಿಸಿದರು.

   

ಉಪನ್ಯಾಸಕರಾದ ಕಾರ್ತಿಕ್ ಕೃಷ್ಣ ಮತ್ತು ಸೌಮ್ಯಾ ಶೆಟ್ಟಿ ನಿರೂಪಣೆಗೈದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top