ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‍ಪ್ರಿನೋರ್‍ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗದಿಪಡಿಸಲಾಗಿರುತ್ತದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ.
ಜಿಲ್ಲೆಯಲ್ಲಿ ಈ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 5 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ