ಜ. 17 ರಿಂದ ಉಡುಪಿ ನಗರದಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟ, ಸ್ಥಳ ಪರಿಶೀಲನೆ

Upayuktha
0

ಉಡುಪಿ: ಕರ್ನಾಟಕ ರಾಜ್ಯ ಒಲಂಪಿಕ್ಸ್ ಸಂಸ್ಥೆಯು ಉಡುಪಿ ಮತ್ತು ಮಂಗಳೂರಿನಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟವನ್ನು ನಡೆಯಲಿದ್ದು, ಉಡುಪಿ ನಗರದಲ್ಲಿ ನಡೆಯಲಿರುವ ಕ್ರೀಡೆಗಳಿಗೆ ಅಗತ್ಯವಿರುವ ಮೈದಾನದ ವ್ಯವಸ್ಥೆ, ಕ್ರೀಡಾಪಟುಗಳಿಗೆ ವಸತಿ ಸೇರಿದಂತೆ ಮತ್ತಿತರ ಸೌಲಭ್ಯಗಳ ಕುರಿತು ಪರಿಶೀಲನೆಯನ್ನು ಶಾಸಕ ಯಶ್‍ಪಾಲ್ ಎ ಸುವರ್ಣ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಬುಧವಾರ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಿದರು. 


ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಜನವರಿ 17 ರಿಂದ ನಡೆಯಲಿರುವ ರಾಜ್ಯದ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿ ನಗರದಲ್ಲಿಯೇ 11 ಕ್ಕೂ ಹೆಚ್ಚು ಕ್ರೀಡೆಗಳು ಎಂಟು ದಿನಗಳ ಕಾಲ ನಡೆಯಲಿದೆ. ಅಜ್ಜರಕಾಡು ಜಿಲ್ಲಾ ಮಟ್ಟದ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಜೂಡೋ, ಕುಸ್ತಿ, ಬಾಕ್ಸಿಂಗ್, ಕಬ್ಬಡಿ, ಸೈಕ್ಲಿಂಗ್‍ಗಳು ನಡೆದರೆ, ಮಾಹೆ ವಿಶ್ವ ವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಲಾಂಗ್ ಟೆನ್ನಿಸ್, ಟೇಬಲ್ ಟೆನ್ನಿಸ್ ಹಾಗೂ ಹಾಕಿ ಕ್ರೀಡೆಗಳು ನಡೆಯಲಿದೆ. ಬ್ರಹ್ಮಾವರದ ಬೈಕಾಡಿಯ ಸ್ವರ್ಣಾ ನದಿಯಲ್ಲಿ ಕಯಾಕಿಂಗ್ ನಡೆಯಲಿದ್ದು, ಸುಮಾರು 2500 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದು, ಕ್ರೀಡಾ ಚಟುವಟಿಕೆಗಳು ಶಿಸ್ತು ಬದ್ಧವಾಗಿ ನಡೆಸಲು ಯೋಜನೆಗಳನ್ನು ರೂಪಿಸಿಕೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದರು. 


ಶಾಸಕ ಯಶ್‍ಪಾಲ್ ಎ ಸುವರ್ಣ ಮಾತನಾಡಿ, ಒಲಂಪಿಕ್ಸ್ ಕ್ರೀಡಾ ಕೂಟದಲ್ಲಿ ಸ್ಪರ್ಧಿಸಲು ಜಿಲ್ಲೆಯ ವಿವಿಧ ಕ್ರೀಡಾಪಟುಗಳಿಗೆ, ತೀರ್ಪುಗಾರರಿಗೆ ಹಾಗೂ ಅಧಿಕಾರಿಗಳು ಸೇರಿದಂತೆ ಮತ್ತಿತರರು ಆಗಮಿಸಲಿದ್ದು, ಇವರುಗಳಿಗೆಲ್ಲಾ ಉಳಿಯಲು ವಸತಿ ಸೌಕರ್ಯ, ಊಟೋಪಚಾರದ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದರು.


ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಐ.ಟಿ.ಡಿ.ಪಿ ಯ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top