ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘ (ರಿ)ಯ ಸದಸ್ಯ ಹಾಗೂ ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ವಿದ್ಯಾಧರ ಇಡ್ಯಾ (88) ಅವರು ಜನವರಿ 16ರಂದು ನಿಧನ ಹೊಂದಿದರು. ಅವರು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ನಂತರ ಸುರತ್ಕಲ್‌ನಲ್ಲಿ ನೆಲೆಸಿದ್ದ ಅವರು ಜ್ಯೋತಿಷ್ಯದ ಬಗ್ಗೆ ಅಪಾರವಾದ ಪಾಂಡಿತ್ಯ ಹೊಂದಿದ್ದರು. ಅವರು ರಕ್ಷಣಾ ಇಲಾಖೆಯ ಪತ್ರಿಕೆಗಳ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು.
ಹಿಂದು ವಿದ್ಯಾದಾಯಿನೀ ಸಂಘದ ಆಡಳಿತ ಸಮಿತಿಯ ಸದಸ್ಯರಾಗಿ, ಗೋವಿಂದ ದಾಸ ಕಾಲೇಜಿನ ಆಡಳಿತ ಪರಿಷತ್‌ನ ಸದಸ್ಯರಾಗಿ ಮಾರ್ಗದರ್ಶಕರಾಗಿದ್ದರು. ಕೊಡುಗೈ ದಾನಿಗಳಾಗಿದ್ದ ಅವರು ಅರ್ಹ ವಿದ್ಯಾರ್ಥಿಗಳಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ವೈದ್ಯಕೀಯ ಚಿಕಿತ್ಸೆಗೆ, ವಿವಿಧ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಸೇವಾ ಸಂಸ್ಥೆಗಳಿಗೆ ಆರ್ಥಿಕ ಕೊಡುಗೆಗಳನ್ನು ನೀಡಿದ್ದಾರೆ.
ಅವರ ನಿಧನಕ್ಕೆ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಹೆಚ್. ಹಾಗೂ ಪದಾಧಿಕಾರಿಗಳು, ಹಿಂದು ವಿದ್ಯಾದಾಯಿನಿ ಸಂಘದ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸಂತಾಪ ಸೂಚಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ