ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿಯ ಪ್ರಯುಕ್ತ ಗ್ರಂಥಾಲಯದಲ್ಲಿ ಸ್ವಾಮಿ ವಿವೇಕಾನಂದರ ಪುಸ್ತಕಗಳ ಪ್ರದರ್ಶನವನ್ನು ಹಮ್ಮಿಕೊಂಡಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿ , ಹಿಂದಿ ವಿದ್ಯಾದಾಯಿನೀ ಸಂಘದ ಸದಸ್ಯ ಟಿ. ಸುಬ್ರಮಣ್ಯ , ಡಾ. ಕಾರ್ತಿಕ್ ಜೆ, ಗ್ರಂಥಪಾಲಕಿ ಡಾ.ಸುಜಾತಾ ಬಿ, ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಟಿ. ಸುಬ್ರಮಣ್ಯರವರು ಗ್ರಂಥಾಲಯಕ್ಕೆ ಕನ್ನಡ ಸಂಘ ಕಾಂತಾವರ (ರಿ) ಪ್ರಕಾಶನದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ