ಸುರತ್ಕಲ್: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವುದು ಮತ್ತು ಸಂವಹನ ಕೌಶಲ್ಯವನ್ನು ಮತ್ತು ಉದ್ಯೋಗ ಕೌಶಲ್ಯಗಳನ್ನು ಸುಧಾರಿಸುವುದರಲ್ಲಿ ಉದ್ಯೋಗ ಕೌಶಲ್ಯಗಳ ಕುರಿತಾದ ಕಾರ್ಯಾಗಾರಗಳ ಪಾತ್ರ ಪ್ರಮುಖವಾಗಿದೆ. ಪ್ರಸ್ತುತ ಕಾಲಘಟ್ಟಕ್ಕೆ ಅಗತ್ಯವಾದ ಮೃದು ಕೌಶಲ್ಯಗಳನ್ನು ಕಲಿಯುವತ್ತ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ದಕ್ಷಿಣ ಕನ್ನಡದ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸುಭದ್ರ ರಾವ್ ನುಡಿದರು.
ಅವರು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ, ಕರಿಯರ್ ಡೆವಲಪ್‌ಮೆಂಟ್ ಮತ್ತು ಪ್ಲೇಸ್‌ಮೆಂಟ್ ಸೆಲ್ ಹಾಗೂ ಸ್ನಾತಕೋತ್ತರ ವಾಣಿಜ್ಯ ಮತ್ತು ರಸಾಯನ ಶಾಸ್ತ್ರ ವಿಭಾಗಗಳು. ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಕೇಂದ್ರ (ವಿರಾಟ್)ದ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಉದ್ಯೋಗ ಕೌಶಲ್ಯಗಳ ಕುರಿತ ಕಾರ್ಯಾಗಾರ ಸರಣಿಯ ಮೃದುಕೌಶಲ್ಯ ವರ್ಧನೆ ಕಾರ್ಯಾಗಾರದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲೇ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದರಿಂದ ಉತ್ತಮ ವೃತ್ತಿ ಅವಕಾಶಗಳು ಲಭಿಸುವಲ್ಲಿ ಸಹಾಯಕವಾಗುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿ, ಅಪ್‌ಸ್ಕಿಲ್ ಸಂಸ್ಥೆ ಮಂಗಳೂರಿನ ಸಹ ಸಂಸ್ಥಾಪಕ ಪ್ರಜ್ವಲ್ ವಿದ್ಯಾರ್ಥಿಗಳ ಕೌಶಲ್ಯಗಳನ್ನು ವರ್ಧಿಸುವ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕ ಮಾಹಿತಿ ನೀಡಿದರು.
ಕಾರ್ಯಕ್ರಮ ಸಂಯೋಜಕ ವಾಣಿಜ್ಯ ವಿಭಾಗದ ಡೀನ್ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ. ಗಣೇಶ ಆಚಾರ್ಯ ಬಿ. ಸ್ವಾಗತಿಸಿ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಯನ್ನು ಬಲಪಡಿಸುವ ಉದ್ದೇಶದಿಂದ ನಿರಂತರವಾಗಿ ವೃತ್ತಿ ಕೌಶಲ್ಯಗಳ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕಾರ್ತಿಕ್ ಜೆ.ಎಸ್., ಉಪನ್ಯಾಸಕರಾದ ಹರ್ಷರಾಣಿ, ಅಶ್ವಿತ ವಿ. ಶೆಟ್ಟಿ., ಕೀರ್ತನ್, ನಿರೀಕ್ಷಾ ಪಿ. ಮತ್ತು ಕೆರೋಲಿನ್ ವೆನಿಸ್ಸಾ ಪಿಂಟೋ ಉಪಸ್ಥಿತರಿದ್ದರು. ಪ್ರತೀಕ್ಷಾ ವಂದಿಸಿದರು. ವೈಭವಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ