ಸುರತ್ಕಲ್: ರಾಧಾದಯಾನಂದರಾವ್ ಟ್ರಸ್ಟ್‌ನವರು ದಿ.ಪೇಜಾವರ ದಯಾನಂದರಾವ್ ಅವರ ಸವಿನೆನಪಿಗಾಗಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಹಿಂದು ವಿದ್ಯಾದಾಯಿನೀ ಸಂಘ (ರಿ.), ಸುರತ್ಕಲ್‍ನ ಆಡಳಿತಕ್ಕೊಳಪಟ್ಟ ಗೋವಿಂದದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ಸಹಯೋಗದೊಂದಿಗೆ ಜನವರಿ 18ರಂದುಕಾಲೇಜಿನ ದೃಶ್ಯಶ್ರಾವ್ಯ ಮಂದಿರದಲ್ಲಿ ಪೂರ್ವಾಹ್ನ 10.00 ಗಂಟೆಗೆ ನಡೆಯಲಿದೆ.
ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಹಿಂದು ವಿದ್ಯಾದಾಯಿನೀ ಸಂಘ (ರಿ.), ಸುರತ್ಕಲ್‍ನ ಅಧ್ಯಕ್ಷ ಜಯಚಂದ್ರ ಹತ್ವಾರ್ ಹೆಚ್. ಮತ್ತು ಡಾ.ದಯಾನಂದ ಪೈ - ಸತೀಶ್ ಪೈ ಸರಕಾರಿ ಪ್ರಥಮದರ್ಜೆಕಾಲೇಜು, ಮಂಗಳೂರಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಮುಖ್ಯ ಅತಿಥಿಗಳಾಗಿ ಹಾಗೂ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ.ಗೋಖಲೆ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಧಾದಯಾನಂದರಾವ್ ಟ್ರಸ್ಟ್‌ನ ನಿರ್ವಹಣಾ ಟ್ರಸ್ಟಿ ರಾಧಾರಾವ್ , ಟ್ರಸ್ಟಿಗಳಾದ ಪ್ರವೀಣ್‍ರಾವ್ ಪೇಜಾವರ ಮತ್ತು ಪೂರ್ಣಿಮಾರಾವ್, ಕಾಲೇಜಿನ ಉಪಪ್ರಾಂಶುಪಾಲ ಪ್ರೊ.ನೀಲಪ್ಪ ವಿ., ಆಂತರಿಕಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ. ಹರೀಶಆಚಾರ್ಯ ಪಿ., ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಡಾ.ಸೌಮ್ಯ ಪ್ರವೀಣ್ ಕೆ. ಉಪಸ್ಥಿತರಿರುವರು ಎಂದು ಪ್ರಕಟಣೆಯು ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ