ಸ್ವಾಮಿ ವಿವೇಕಾನಂದರ ಆದರ್ಶಗಳು ಶತಮಾನಗಳಿಗೂ ಪ್ರಸ್ತುತ: ರಾಘವೇಂದ್ರ ಪ್ರಭು ಕರ್ವಾಲು

Upayuktha
0


ಉಡುಪಿ: ಸ್ವಾಮಿ ವಿವೇಕಾನಂದರ ಸಂದೇಶಗಳು ಶತಶತಮಾನಗಳಿಗೂ ಅನ್ವಯ. ಅವರ ದಿವ್ಯ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸಾರ್ಥಕ ಎಂದು ವ್ಯಕ್ತಿತ್ವ ವಿಕಸನ ತರಬೇತಿದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.


ಅವರು ನೆಹರು ಯುವ ಕೇಂದ್ರ ಉಡುಪಿ, ನವ್ಯ ಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್, ಕನ್ನಡ ಜಾನಪದ ಪರಿಷತ್ ಇದರ ವತಿಯಿಂದ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜನವರಿ 12ರಂದು ನಡೆದ ರಾಷ್ಟ್ರೀಯ ಯುವ ದಿನಾಚರಣೆ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸ್ವಾಮೀಜಿ ಬದುಕಿದ್ದು ಅತ್ಯಂತ ಕಡಿಮೆ ಸಮಯ. ಆದರೆ ಮಾಡಿದ ಸಾಧನೆ ಹೆಚ್ಚು ಎಂದರು.


ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ಮಾತನಾಡಿ, ಸ್ವಾಮಿ ವಿವೇಕಾನಂದರು ಪ್ರಪಂಚಕ್ಕೆ ಆದರ್ಶರು. ಅವರ ಕೊಡುಗೆಯನ್ನು ನಾವೆಲ್ಲರೂ ಸದಾ ನೆನಪು ಮಾಡಬೇಕು ಎಂದರು.


ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ, ಚಿಕ್ಕಮಠ, ಸ್ವತಂತ್ರ ಹೋರಾಟಗಾರರನ್ನು ಕೂಡ ನಾವು ಪೂಜಿಸಬೇಕು. ಸ್ವಾಮಿ ವಿವೇಕಾನಂದರು ಚಿಕಾಗೋ ಮಾಡಿದ ಭಾಷಣ ಇಂದಿಗೂ ಅಲ್ಲಿನ ಜನರು ನೆನಪು ಮಾಡಿಕೊಳ್ಳುತ್ತಾರೆ. ಅಂತ ಶ್ರೇಷ್ಠ ಸಂತ ನಮ್ಮ ದೇಶದಲ್ಲಿ ಹುಟ್ಟಿರುವುದು ನಮ್ಮ ಪುಣ್ಯ ಎಂದರು.


ಎಬಿವಿಪಿ ಜಿಲ್ಲಾ ಪ್ರಮುಖ್ ರಾಜಶಂಕರ್ ಸ್ವಾಮೀಜಿಯವರು ರಚನೆ ಮಾಡಿದ ಭಾರತ ಮಾತೆಯ ಭಕ್ತಿ ಗೀತೆಯ ಬಗ್ಗೆ ಮಾತನಾಡಿದರು. ಹಾಸ್ಟೆಲ್ ನ ಗಿರಿಜಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವೇಕಾನಂದರ ಪುಸ್ತಕಗಳನ್ನು ನೀಡಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top