ಮಣಿಪಾಲ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ಇವರ ಆಶ್ರಯದಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ವಿಭಾಗದಲ್ಲಿ ಸ್ವಸ್ತಿ ಎಂ ಭಟ್ 3 ನೇ ರ್‍ಯಾಂಕ್ (ಶೇ.99.25) ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದುಷಿ ಸುರೇಖಾ ಭಟ್ ಅವರಲ್ಲಿ ಜೂನಿಯರ್ ಹಂತದ ಸಂಗೀತ ತರಬೇತಿಯನ್ನು ಪಡೆದು, ಪ್ರಸ್ತುತ ವಿದುಷಿ ಉಮಾಶಂಕರಿ ಹಾಗೂ ರಾಘವೇಂದ್ರ ಆಚಾರ್ಯ ಇವರಲ್ಲಿ ಸಂಗೀತ ಅಭ್ಯಾಸ ಮುಂದುವರಿಸುತ್ತಿದ್ದಾಳೆ. ಇವಳು ಮೃದಂಗ ಶಿಕ್ಷಣವನ್ನು ವಿದ್ವಾನ್ ಬಾಲಚಂದ್ರ ಭಾಗವತ್ ಅವರಲ್ಲಿ ಕಲಿಯುತ್ತಿದ್ದಾಳೆ.
ಈಕೆ ಡಾ. ಮಧುಶಂಕರ ಭಟ್ ಮೈಲ ಮತ್ತು ಉಮಾ ದಂಪತಿಗಳ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ