ತೆಂಕನಿಡಿಯೂರು: ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

Upayuktha
0


ತೆಂಕನಿಡಿಯೂರು: ಸರ್ಕಾರಿ ಪ್ರಥಮ ದರ್ಜೆಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಐಕ್ಯೂಎಸಿ, ಎನ್.ಎಸ್.ಎಸ್.,ಯೂತ್‍ರೆಡ್‍ಕ್ರಾಸ್‍ ಘಟಕ ಮತ್ತು ಎಲ್ಲಾ ಸ್ನಾತಕೋತ್ತರ ವಿಭಾಗಗಳು, ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆಯನ್ನು ಸೋಮವಾರ ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು.  


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಾಂತಎನ್. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು “ವಿವೇಕಾನಂದರ ಕನಸಿನ ಭಾರತ” ವಿಷಯದ ಬಗ್ಗೆ ಮಾತನಾಡಿ 19ನೇ ಶತಮಾನದ ಸಮಾಜ ಸುಧಾರಕರಾಗಿ ಬಲು ವಿಶಿಷ್ಟವಾದ ವಿವೇಕಾನಂದರು ಸುಧಾರಿತ ಭಾರತೀಯ ಸಮಾಜ ಮತ್ತು ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಬೇಕು. ವ್ಯಕ್ತಿ ಸ್ವಾತಂತ್ರ್ಯ, ವ್ಯಕ್ತಿ ಗೌರವ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಮುಕ್ತವಾದ ಅವಕಾಶವಿರುವ ಮೌಢ್ಯಗಳಿಂದ ಮುಕ್ತ ವಿವೇಕಯುವ ಸಮಾಜ ನಿರ್ಮಾಣಗೊಂಡಲ್ಲಿ ಮಾತ್ರ ವೈವಿಧ್ಯತೆಯ ಭಾರತ ಪ್ರಕಾಶಿಸಬಲ್ಲುದು.  ಸಾಮಾಜಿಕ ಅನಿಷ್ಟಗಳನ್ನು ಹೋಗಲಾಡಿಸಿ ವೈಚಾರಿಕತೆಯನ್ನು ವೈಗೂಡಿಸಿಕೊಂಡಾಗ ಮಾತ್ರ ವೈವಿಧ್ಯಮಯ ಭಾರತ ಇನ್ನಷ್ಟು ಪ್ರಕಾಶಿಸ ಬಲ್ಲುದು.  ಶಾಂತಿ ಮತ್ತು ಅಹಿಂಸೆಯಿಂದ ದೇಶದ ಉನ್ನತಿ ಹಾಗೂ ರಾಷ್ಟ್ರೀಯ ಐಕ್ಯತೆ ಸಾಧ್ಯ ಎಂದರು. 


ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾವಂಕರ ಇವರ ಅಧ್ಯಕ್ಷೀಯ ಭಾಷಣದಲ್ಲಿ ಇಂದಿನ ಯುವಕರು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆ?  ಉತ್ತಮ ಮತ್ತು ಸದೃಢ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆಯ ಪಾತ್ರದ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ರಘು ನಾಯ್ಕ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸ್ನಾತಕೋತ್ತರ ವಿಭಾಗ, ಡಾ. ಉದಯ ಶೆಟ್ಟಿ ಕೆ. ರೋವರ್ಸ್ ಮತ್ತು ರೇಂಜರ್ಸ್‍ ಘಟಕ ಸಂಯೋಜನಾಧಿಕಾರಿ, ಗ್ರಂಥಪಾಲಕ  ಶ್ರೀ ಕೃಷ್ಣ, ಕನ್ನಡ ವಿಭಾಗ ಮುಖ್ಯಸ್ಥೆ ರತ್ನಮಾಲಾ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇತಿಹಾಸ ವಿಭಾಗ ಉಪನ್ಯಾಸಕ  ಡಾ. ಮಹೇಶ್‍ ಕುಮಾರ್ ಕೆ.ಇ. ಸ್ವಾಗತಿಸಿದರು.  ದ್ವಿತೀಯ ಎಂ.ಎ. ಇತಿಹಾಸದ ವಿದ್ಯಾರ್ಥಿ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.  


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top