1 ಗಂಟೆಯಲ್ಲಿ ಹೂವಾಗಿ ಅರಳಿದ 76 ಕಲ್ಲಂಗಡಿ!!
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್'ಗೆ ಸೇರ್ಪಡೆಗೊಂಡ ಎರಡು ದಾಖಲೆಗಳು
ಬೆಂಗಳೂರು: ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ. ಕೇವಲ 19 ನಿಮಿಷ 17 ಸೆಕೆಂಡ್'ನಲ್ಲಿ ಒಟ್ಟು 55 ಕಲ್ಲಂಗಡಿ ಹಣ್ಣುಗಳಲ್ಲಿ ರಾಷ್ಟ್ರಗೀತೆಯನ್ನು ಕೆತ್ತಿದ್ದಾರೆ.
ಭಾನುವಾರ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್’ಮೆಂಟ್ ಈ ದಾಖಲೆಗೆ ಸಾಕ್ಷಿಯಾಯಿತು.
ರಾಷ್ಟ್ರಗೀತೆಯ ಸಾಲುಗಳನ್ನು ಕೆತ್ತಲು ಒಟ್ಟು 55 ಕಲ್ಲಂಗಡಿ ಹಣ್ಣುಗಳನ್ನು ಬಳಸಿಕೊಳ್ಳಲಾಯಿತು. ಜನಗಣ ಮನ ಅಧಿನಾಯಕ ಜಯ ಹೇ…. ಎಂದು ಸಾಗುವ ಸಾಲುಗಳನ್ನು ಕಲ್ಲಂಗಡಿ ಹಣ್ಣಿನ ಮೇಲೆ ಆಕರ್ಷಕವಾಗಿ ಕೆತ್ತುವ ಚಮತ್ಕಾರವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಇದೇ ಸಂದರ್ಭ ವಿದ್ಯಾರ್ಥಿನಿ ಪೂಜಾ ನಾಯ್ಕ್ ಅವರು ಒಂದು ಗಂಟೆಯಲ್ಲಿ 76 ಕಲ್ಲಂಗಡಿ ಹಣ್ಣುಗಳ ಮೇಲೆ ಹೂವಿನ ವಿನ್ಯಾಸ ಕೆತ್ತಿರುವ ದಾಖಲೆಯೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್'ಗೆ ಸೇರ್ಪಡೆಗೊಂಡಿತು. ಈ ಹಿಂದೆ ಆಂಧ್ರದ ಸಂಸ್ಥೆಯೊಂದು ಒಂದು ಗಂಟೆಯಲ್ಲಿ 30 ಕಲ್ಲಂಗಡಿ ಹಣ್ಣಿನಲ್ಲಿ ಹೂವಿನ ವಿನ್ಯಾಸ ರಚಿಸಿದ ದಾಖಲೆ ಇತ್ತು. ಇದನ್ನು ಪೂಜಾ ನಾಯ್ಕ್ ಹಿಂದಿಕ್ಕಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ನಿವೃತ್ತ ಸದಸ್ಯರೂ, ಕರ್ನಾಟಕ ಲೋಕಾಯುಕ್ತದ ನಿವೃತ್ತ ವಿಜಿಲೆನ್ಸ್ ನಿರ್ದೇಶಕರೂ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಡಿ.ಎನ್. ಮುನಿಕೃಷ್ಣ ಹಾಗೂ ಐ.ಬಿ.ಆರ್.ನ ಅಡ್ಜುಡಿಕೇಟರ್ ಹರೀಶ್ ಆರ್. ಮುಖ್ಯ ಅತಿಥಿಯಾಗಿದ್ದು, ಸಂಸ್ಥೆಯ ಅಧ್ಯಕ್ಷ ಆರ್. ಭೂಮಿನಾಥನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ