ಮಂಗಳೂರು: ನಗರದ ಉರ್ವ ಮಾರ್ಕೆಟ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣವು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು.
ಅವರು ಶುಕ್ರವಾರ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.
ಗುಣಮಟ್ಟದಲ್ಲಿ ರಾಜಿಯಾಗದೆ ಈ ಕ್ರೀಡಾಂಗಣದ ಕಾಮಗಾರಿಯನ್ನು ನಡೆಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು ಉನ್ನತ ತಂತ್ರಜ್ಞಾನದ ಸಹಾಯದಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಸ್ಪೀಕರ್ ಸೂಚಿಸಿದರು. ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಕ್ರೀಡಾಂಗಣವನ್ನು ಬಳಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಆದಷ್ಟು ಬೇಗನೆ ಕ್ರೀಡಾಂಗಣವನ್ನು ಉದ್ಘಾಟಿಸಿ ಕ್ರೀಡಾ ಚಟುವಟಿಕೆಗಳಿಗೆ ಸಮರ್ಪಿಸಲಾಗುವುದೆಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ, ಸ್ಮಾರ್ಟ್ ಸಿಟಿ ಎಂ ಡಿ ರಾಜು, ಕ್ರೀಡಾ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ