ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮಂಗಳವಾರ ಮಲ್ಪೆ ಪೊಲೀಸ್ ಠಾಣೆಯ ಬಳಿ ಚಾಲನೆ ನೀಡಿದರು.


ಇದೇ ಸಂಧರ್ಭದಲ್ಲಿ ಮಾತನಾಡಿದ ಅವರು, ಸಿರಿಧಾನ್ಯದ ಬಳಕೆಯಿಂದ ಯಾವ ರೀತಿಯ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು, ಅರಿತು ಅವುಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಬೇಕು. ಸಿರಿಧಾನ್ಯಗಳು ಉತ್ತಮ ಪೋಷಕಾಂಶವುಳ್ಳ ಆಹಾರವಾಗಿರುವುದರಿಂದ ಇದರ ಸೇವನೆಯ ಜೊತೆಗೆ ಸಿರಿಧಾನ್ಯಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದರು.


ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ವಿಜಯ್ ಕೊಡವೂರು, ಅಪರ ಜಿಲ್ಲಾಧಿಕಾರಿ ನಾಗರಾಜ ವಿ ನಾಯಕ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಉಪ ಕೃಷಿ ನಿರ್ದೇಶಕ ಚಂದ್ರಶೇಖರ ನಾಯಕ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಲಿ, ಮಲ್ಪೆ ಪೊಲೀಸ್ ಠಾಣೆಯ ಪಿ.ಎಸ್.ಐ ರವಿ, ಕೆ.ವಿ.ಕೆ ಮುಖ್ಯಸ್ಥ ಧನಂಜಯ, ಕೃಷಿಕ ಸಂಘದ ರಾಜ್ಯ ಪ್ರತಿನಿಧಿ ಪ್ರದೀಪ್ ಹೆಬ್ಬಾರ, ಬೈಂದೂರು ತಾಲೂಕು ಕೃಷಿಕ ಸಮಾಜ ವೆಂಕಟೇಶ ಹೆಬ್ಬಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top