ಉಡುಪಿ: ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಖನಿಜ ಭವನ-ನೂತನ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭವು ಜನವರಿ 31 ರಂದು ಬೆಳಗ್ಗೆ 10.30 ಕ್ಕೆ ನಗರದ ದೊಡ್ಡಣಗುಡ್ಡೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ತಂಗಡಗಿ, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಮಣ್‍ದೀಪ್ ಚೌದರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಆರ್.ಗಿರೀಶ್, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಬಳ್ಳಾರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಪರ ನಿರ್ದೇಶಕ ಟಿ. ಮಹಾಂತೇಶ್, ಬೆಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಂಟಿ ನಿರ್ದೇಶಕ (ಆಡಳಿತ) ಡಾ.ಸಿ.ವಿ.ರಾಮನ್, ಮೈಸೂರು ದಕ್ಷಿಣ ವಲಯ ಜಂಟಿ ನಿರ್ದೇಶಕಿ ಡಾ. ಲಕ್ಷ್ಮಮ್ಮ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಂಟಿ ನಿರ್ದೇಶಕ (ಖನಿಜ) ರಾನ್ ಜಿ ನಾಯ್ಕ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ