ಕರ್ನಾಟಕ ಕ್ರೀಡಾಕೂಟ - ಉದ್ಘಾಟನಾ ಸಮಾರಂಭ

Upayuktha
0

 


ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸ್ಪರ್ಧೆಗಳು ಮಂಗಳೂರು ಹಾಗೂ ಉಡುಪಿಯಲ್ಲಿ ಜನವರಿ 17 ರಿಂದ 23 ರ ವರೆಗೆ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜನವರಿ 17 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಕ್ರೀಡಾಕೂಟ ಉದ್ಘಾಟಿಸಲಿದ್ದು, ಮಂಗಳೂರು ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ  ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.


ಕ್ರೀಡಾ ಜ್ಯೋತಿಯ ಪ್ರಜ್ವಲನೆಯನ್ನು ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಹಾಗೂ ಕ್ರೀಡಾ ಧ್ವಜಾರೋಹಣವನ್ನು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ನೆರವೇರಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್, ಫೀಬಾ ಏಷ್ಯಾ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಡಾ.ಕೆ ಗೋವಿಂದರಾಜ್, ಸಂಸದರಾದ ಬಿ.ವೈ ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭೆ ಸಂಸದರಾದ ಡಿ.ವೀರೇಂದ್ರ ಹೆಗ್ಗಡೆ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಯಶ್‍ಪಾಲ್ ಎ ಸುವರ್ಣ, ಎ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಡಾ.ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ್ ಯು ಹಾಗೂ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ್, ಐವನ್ ಡಿ ಸೋಜಾ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಗಳೂರು ಮಹಾನಗರ ಪಾಲಿಕೆಯ ಮಹಾ ಪೌರ ಮನೋಜ್ ಕುಮಾರ್, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top