ಉಡುಪಿ: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಚಿನ್ನದ ಪದಕ ವಿಜೇತೆ, ಎಂಜಿಎಂ ಸಂಧ್ಯಾ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ಕು. ಛಾಯಾ ಎಸ್. ಪೂಜಾರಿ ಇವರನ್ನು ಪರ್ಕಳದ ಗೇೂಳಿಕಟ್ಟೆ ಸ್ವರ್ಣ ಫ್ರೆಂಡ್ಸ್ ಸರ್ಕಲ್ ಇವರ ಆಶ್ರಯದಲ್ಲಿ ಊರಿನ ಹಿರಿಯ ನಾಗರಿಕ ಗಣ್ಯರು ಅಭಿನಂದಿಸಿ ಸಂಮಾನಿಸಿದರು.
ಈ ಸಂದರ್ಭದಲ್ಲಿ ಎಂಜಿಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ.ಎಸ್. ದೇವಿದಾಸ್ ನಾಯ್ಕ, ಎಂಜಿಎಂ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಂ. ವಿಶ್ವನಾಥ ಪೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ರಾಜಮೂರ್ತಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾಲೇಜು ವತಿಯಿಂದ ಅಭಿನಂದಿಸಿ ಸಂಮಾನಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ