ಶಿವಪಾಡಿ ವೈಭವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಆಹ್ವಾನ

Upayuktha
0

ಮಾಜಿ ಶಾಸಕ ರಘುಪತಿ ಭಟ್ ಸೇರಿದಂತೆ ಇತರರು ಭಾಗಿ




ಉಡುಪಿ: ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಫೆಬ್ರವರಿ 22ರ ಶನಿವಾರದಿಂದ 26ರ ಬುಧವಾರದವರೆಗೆ ಯಕ್ಷಮೇಳ, ಕೃಷಿ ಮೇಳ, ಆಹಾರಮೇಳ, ಮನರಂಜನೆ ಮೇಳ, ಆರೋಗ್ಯ ಮೇಳಗಳನ್ನೊಳಗೊಂಡ ಶಿವಪಾಡಿ ವೈಭವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಆಹ್ವಾನಿಸಲಾಯಿತು.


ಶಿವಪಾಡಿ ವೈಭವ ಆಚರಣಾ ಸಮಿತಿಯ ಅಧ್ಯಕ್ಷರು, ಮಾಜಿ ಶಾಸಕರಾದ ಕೆ ರಘುಪತಿ ಭಟ್ ರವರ ನೇತೃತ್ವದ ತಂಡದಿಂದ ಖಾವಂದರನ್ನು ಭೇಟಿಯಾಗಿ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನಿಸಿದರು.


ಈ ಸಂದರ್ಭದಲ್ಲಿ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ಮಹೇಶ್ ಠಾಕೂರ್, ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ದಿನೇಶ್ ಪ್ರಭು, ಪ್ರಮುಖರಾದ ಸುವರ್ಧನ್, ರಾಧಾಕೃಷ್ಣ ಸಾಮಂತ್, ಮನೋಹರ ಪ್ರಭು, ಚಂದ್ರಶೇಖರ್ ನಾಯ್ಕ್, ಶ್ರೀಕಾಂತ್ ಪ್ರಭು ಹಾಗೂ ಸಂದೇಶ್ ಪ್ರಭು ಜೊತೆಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top