ಉಡುಪಿ: ಫೆಬ್ರವರಿ ಮೊದಲನೇ ವಾರದಲ್ಲಿ ಬೃಹತ್ ಉದ್ಯೋಗ ಮೇಳ

Upayuktha
0


ಉಡುಪಿ: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್‍ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.


ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‍ಗಾರ್ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಯುವಜನರಿಗೆ ಉದ್ಯೋಗವನ್ನು ಒದಗಿಸುವ ಬೃಹತ್ ಉದ್ಯೋಗ ಮೇಳವು ಫೆಬ್ರವರಿ ಮೊದಲನೇ ವಾರದಲ್ಲಿ ಉಡುಪಿ ನಗರದ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಈ ಮೇಳದಲ್ಲಿ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳ 100 ಕ್ಕೂ ಹೆಚ್ಚು  ಉದ್ಯೋಗದಾತರುಗಳು ಭಾಗವಹಿಸಲಿದ್ದು, 3500 ಕ್ಕೂ ಹೆಚ್ಚು ಉದ್ಯೋಗ ಆಕಾಂಶಿಗಳು ಮೇಳಕ್ಕೆ ಆಗಮಿಸುವ ನಿರೀಕ್ಷೆಯಲಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ, ಯಶಸ್ವಿಗೊಳಿಸಬೇಕು ಎಂದರು. 

 

ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ಶಾಲಾ -ಕಾಲೇಜುಗಳಲ್ಲಿ ಹಾಗೂ ವೃತ್ತಿಪರ ವಿದ್ಯಾಸಂಸ್ಥೆಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹಳೆ ವಿದ್ಯಾರ್ಥಿಗಳಿಗೂ ಸಹ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು ಎಂದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಾಧ್ಯಮಗಳು ಹೆಚ್ಚಿನ ಪ್ರಚಾರ ಪಡಿಸಿ, ಹೆಚ್ಚು ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.


ಮೇಳದಲ್ಲಿ ಭಾಗವಹಿಸುವ ಉದ್ಯೋಗ ಆಕಾಂಶಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಊಟೋಪಚಾರ ಸೇರಿದಂತೆ ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಹಾಗೂ ನೋಂದಣಿಗೆ ವೆಬ್‍ಸೈಟ್ ಅನ್ನು ಶೀಘ್ರದಲ್ಲಿ ರಚಿಸಿ, ನೋಂದಣಿಗೆ ಅನುವು ಮಾಡಿಕೊಡಬೇಕು ಎಂದರು.


ಕೌಶಲ್ಯ ರೋಜಗಾರ್ ಮೇಳವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಮೇಳವು ಶಿಸ್ತು ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳುವುದರ ಜೊತೆಗೆ ಹೆಚ್ಚು ಜನರಿಗೆ ಉದ್ಯೋಗ ದೊರೆಯುವಂತಾಗಬೇಕು ಎಂದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ ನಾಯಕ್, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್, ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನ ಮುಖ್ಯಸ್ಥರುಗಳು, ವಿವಿಧ ಕಾಲೇಜುಗಳ ಪ್ರತಿನಿಧಿಗಳು,  ಜಿಲ್ಲಾ ಮಟ್ಟದ ಅನುಷ್ಠಾನ ನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top