ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

Upayuktha
0

 


ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‍ಪ್ರಿನೋರ್‍ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ.


ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು 10 ನೇ ತರಗತಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಫೆಬ್ರವರಿ 3 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top