ಫೆ.19-21: ಜಿಕೆವಿಕೆ ಆವರಣದಲ್ಲಿ ರಾಷ್ಟೀಯ ಸಮ್ಮೇಳನ

Upayuktha
0


ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಇಕೋ ಟೂರಿಸಮ್ ಹಾರ್ನೆಸ್ಸಿಂಗ್ ಟ್ರಾವೆಲ್ ಟು ಡಿಸ್ಕವರ್ ನೇಚರ್, ಪ್ರಮೋಟ್ ಕನ್ಸರ್‍ವೇಶನ್ ಅಂಡ್ ಸಪೋರ್ಟ್ ಸಸ್ಟೇನಬಲ್ ಡೆವಲಪ್‍ಮೆಂಟ್ ವಿಷಯದ ಮೇಲೆ ಫೆಬ್ರವರಿ 19 ರಿಂದ 21 ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಾದ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದೆ.


ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ್ ಪೇಪರ್ ಪ್ರೆಸೆಂಟೇಶನ್ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‌ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು. 


ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದ್ದು, ಆಸಕ್ತ ಪ್ರತಿನಿಧಿಗಳು ಫೆಬ್ರವರಿ 12 ರಳೊಗಾಗಿ ಗೂಗಲ್ ಫಾರ್ಮ್ https://forms.gle/WCW9krCt8sGQUP55A ಮೂಲಕ ನೋದಾಯಿಸಿಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಆಕಾಡೆಮಿಯ ಅಧಿಕಾರಿಗಳನ್ನು ಮೊ.ನಂ: 9845258894, 9686449019 ಹಾಗೂ 9620767819 ಅಥವಾ ಅಕಾಡೆಮಿಯ ವೆಬ್‍ಸೈಟ್ https://kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top