ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಸ್ತುಪ್ರದರ್ಶನ ಮತ್ತು ಅಂತರ ಕಾಲೇಜು ಉತ್ಸವ

Upayuktha
0

ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೇವೆ ಹಾಗೂ ನಾಯಕತ್ವ ಗುಣಗಳೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.




ಉಜಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ವಿದ್ಯಾರ್ಥಿಗಳು ಸೇವೆ ಹಾಗೂ ನಾಯಕತ್ವ ಗುಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹೇಳಿದರು.


ಅವರು ಸೋಮವಾರ ಉಜಿರೆಯಲ್ಲಿ ಇಂದ್ರಪ್ರಸ್ಥ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಸ್ತುಪ್ರದರ್ಶನ ಮತ್ತು ಅಂತರ ಕಾಲೇಜು ಉತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಬಾಲ್ಯದ ಸವಿನೆನಪುಗಳು ಜೀವನವಿಡೀ ನೆನಪಿರುತ್ತವೆ. ವ್ಯಕ್ತಿತ್ವವಿಕಸನವೇ ಶಿಕ್ಷಣದ ಗುರಿಯಾಗಿದ್ದು ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ಸಂಸ್ಕಾರದೊಂದಿಗೆ ವಿದ್ಯಾರ್ಥಿಗಳು ಸಭ್ಯ, ಸುಸಂಸ್ಕೃತ ನಾಗರಿಕರಾಗಲು ಪ್ರೇರಣೆ ನೀಡುತ್ತದೆ ಎಂದರು.


ಕೆ.ಪಿ.ಸಿ.ಸಿ. ಕಾರ್ಯದರ್ಶಿ ಅಶ್ವಿತ್‌ಜೈನ್, ಮಹ್ಮದ್‌ತುಂಬೆ, ಮತ್ತು ಪ್ರಸಾದ್‌ಕುಮಾರ್ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ ಇಂತಹ ಉತ್ಸವಗಳು ಮಾನವೀಯ ಮೌಲ್ಯಗಳ ಉದ್ದೀಪನಕ್ಕೆ ಪ್ರೇರಕವಾಗಿವೆ ಎಂದರು.


ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಉಪಸ್ಥಿತರಿದ್ದರು. ರೇಂಜರ್ ಲೀಡರ್ ಗಾನವಿ ಡಿ., ಸ್ವಾಗತಿಸಿದರು. ರೋವರ್ ಲೀಡರ್ ಪ್ರಸಾದ್ ಕುಮಾರ್ ಧನ್ಯವಾದವಿತ್ತರು. ಕುಮಾರಿ ಭೂಮಿಕಾ, ಕೆ.ಎಲ್. ಜೈನ್ ಮತ್ತು ಕುಮಾರಿ ಮಾನಸಅಗ್ನಿಹೋತ್ರಿ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top