ಎಸ್.ಡಿ.ಎಂ. ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

Upayuktha
0



ಉಜಿರೆ:
ಶ್ರೀ ಧ. ಮಂ. ಕಾಲೇಜಿನಲ್ಲಿ  ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲೆ, ಆಡಳಿತಾಂಗ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶಲೀಪ್ ಎ.ಪಿ., “ಮತದಾನದ ಪ್ರಾಮುಖ್ಯ ಏನೆಂದು ಭಾರತದ ಪ್ರಜೆಗಳಾದ ನಾವೆಲ್ಲ ಅರಿತುಕೊಳ್ಳಬೇಕಾಗಿದೆ. ಯಾವುದೇ ಚುನಾವಣೆ ನಡೆದರೂ ಮತದಾರರದ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.


"ಭಾರತವು ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಇಲ್ಲಿಯವರೆಗೆ ಸುಮಾರು 99.1 ಕೋಟಿ ಜನರು ಮತದಾರರ ಪಟ್ಟಿಯಲ್ಲಿ ಅಧಿಕೃತವಾಗಿ ದಾಖಲಾಗಿದ್ದಾರೆ. ರಾಷ್ಟ್ರೀಯ ಮತದಾರರ ದಿನದ ಆಚರಣೆ ಪ್ರಾರಂಭಗೊಂಡು ಇಲ್ಲಿಗೆ 15 ವರ್ಷ ಸಂಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಮತದಾನದ ಮಹತ್ವದ ಬಗ್ಗೆ ಪ್ರಚಾರ, ಮತದಾರರ ಗುರುತಿನ ಚೀಟಿ ವಿತರಣೆ, ಪ್ರತಿಜ್ಞಾವಿಧಿ ಸ್ವೀಕಾರ ಹೀಗೆ ಅನೇಕ ಕಾರ್ಯಕ್ರಮಗಳು ದೇಶದೆಲ್ಲೆಡೆ ನಡೆಯುತ್ತವೆ” ಎಂದು ಅವರು ತಿಳಿಸಿದರು.


ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ನಟರಾಜ್ ಹೆಚ್.ಕೆ. ಪ್ರತಿಜ್ಞಾವಿಧಿ ನೆರವೇರಿಸಿದರು. ಉಪನ್ಯಾಸಕರಾದ ಭಾಗ್ಯಶ್ರೀ, ಕಿರಣ್ ಜೈನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿ ಎ ವಿದ್ಯಾರ್ಥಿನಿಯರಾದ ಮಾನಸ ಸ್ವಾಗತಿಸಿ, ಹರ್ಷಿತಾ ಎಂ. ಕೆ. ಕಾರ್ಯಕ್ರಮ ನಿರೂಪಿಸಿ, ಸುಪ್ರಿತಾ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top