ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ ನಡೆಯಿತು. ವಿದ್ಯಾರ್ಥಿಗಳು ಜಾಥಾ ನಡೆಸಿ, 'ನಿಯಮ ಯಾಕೆ? ನಿಯಮ ಬೇಕೇ?' ಬೀದಿನಾಟಕ ಪ್ರದರ್ಶಿಸಿ ಸಂಚಾರ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಿದರು.
ಕಾಲೇಜು ಆವರಣದಲ್ಲಿ ಉಪ ಪ್ರಾಂಶುಪಾಲೆ ಡಾ. ಶಲೀಫ್ ಎ. ಪಿ. ಅವರು ಜಾಥಾಕ್ಕೆ ಚಾಲನೆ ನೀಡಿದರು. ಉಜಿರೆಯ ಸ್ನಾತಕೋತ್ತರ ಕೇಂದ್ರದವರೆಗೆ ಸಾಗಿದ ಜಾಥಾ ಉಜಿರೆ ಬಸ್ ನಿಲ್ದಾಣ ತಲುಪಿತು. ಅಲ್ಲಿ ಬೀದಿ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಜಾಗೃತಿ ಕರಪತ್ರಗಳನ್ನು ಹಂಚಿದರು. ಉಜಿರೆ ಪಂಚಾಯತ್ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆ ಕಾರ್ಯಕ್ರಮಕ್ಕೆ ಸಹಕರಿಸಿದವು.
ಬಳಿಕ ಕಾಲೇಜು ಒಳಾಂಗಣದಲ್ಲಿ ಬೀದಿ ನಾಟಕ ಪ್ರದರ್ಶಿಸಲ್ಪಟ್ಟಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ., ಅಧ್ಯಾಪಕ ಡಾ. ಭಾನುಪ್ರಕಾಶ್ ಬಿ.ಇ. ಮತ್ತು ಇತರ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ