ಅನ್‌ಲಾಕಿಂಗ್ ಪೊಟೆನ್ಶಿಯಲ್: ಎಸ್‌ಡಿಎಂ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Upayuktha
0
ವಾಣಿಜ್ಯ ಜಗತ್ತಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ಒಳನೋಟಗಳು



ಉಜಿರೆ: ಶ್ರೀ ಧ. ಮಂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ‘ಅನ್ಲಾಕಿಂಗ್ ಪೊಟೆನ್ಶಿಯಲ್: ವಾಣಿಜ್ಯ ಜಗತ್ತಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ಒಳನೋಟಗಳು’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಉಡುಪಿಯ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ರೋಶನಿ ಯಶವಂತ ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ಉದ್ಯೋಗ ಹುಡುಕುವ ಬದಲು ನೀವೇ ಉದ್ಯೋಗ ಸೃಷ್ಟಿಸಿಕೊಳ್ಳಬೇಕು. ಸ್ವಂತ ಉದ್ಯೋಗ ಮಾಡಲು ನಿಮ್ಮಲ್ಲಿ ಅಚಲ ನಿರ್ಧಾರ, ಛಲ, ಸಮಸ್ಯೆಯನ್ನು ಎದುರಿಸುವ ಧೈರ್ಯವಿರಬೇಕು” ಎಂದರು.


ವಿದ್ಯಾರ್ಥಿಗಳು ಆದಷ್ಟು ಇಂಟರ್ನ್‌ಶಿಪ್ ಗಳಿಗೆ ಹೋಗಿ ಅನುಭವ ಪಡೆದುಕೊಳ್ಳಿ. ಅದು ನಿಮ್ಮ ಭವಿಷ್ಯಕ್ಕೆ ಸಹಾಯಕವಾಗಬಹುದು. ಬಿ.ಕಾಂ. ವಿದ್ಯಾರ್ಥಿಗಳಿಗೆ ಹಲವಾರು ಉದ್ಯೋಗಾವಕಾಶಗಳಿವೆ. ಆದರೆ ನೀವು ಅದನ್ನು ಬಳಸಿಕೊಳ್ಳದೆ ಇರುವುದರಿಂದ ಬೇರೆಯವರು ಆ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.  


ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ಪ್ರಾಂಶುಪಾಲೆ ಡಾ. ಶಲೀಪ್ ಕುಮಾರಿ, “ವಿದ್ಯಾರ್ಥಿಗಳು ಜ್ಞಾನ ಹೆಚ್ಚಿಸಿಕೊಳ್ಳಿ. ಇದರಿಂದ ನಿಮ್ಮ ಗುರಿಯನ್ನು ತಲುಪಲು ಸುಲಭವಾಗುತ್ತದೆ. ಮಾರುಕಟ್ಟೆ, ವ್ಯವಹಾರ ಜ್ಞಾನ, ಗ್ರಾಹಕ ನಡವಳಿಕೆ ಬಗ್ಗೆ ನಿಮಗೆ ಅರಿವಿರಲಿ” ಎಂದು ಕಿವಿಮಾತು ಹೇಳಿದರು.


ವಾಣಿಜ್ಯ ನಿಕಾಯದ ಡೀನ್ ಶಕುಂತಲಾ, ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಮಾಲಿನಿ ಅಂಚನ್ ಹಾಗೂ ವಿದ್ಯಾರ್ಥಿನಿ ಸುಶ್ಮಿತಾ ನಿರೂಪಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top