ವಿಟಿಯು ಮಹಿಳೆಯ ಕ್ರಿಕೆಟ್ ತಂಡಕ್ಕೆ ವಿಸಿಇಟಿ ವಿದ್ಯಾರ್ಥಿನಿ ಅನಘ ಕೆ.ಎನ್ ಆಯ್ಕೆ

Upayuktha
0


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಅನಘ.ಕೆ.ಎನ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಇವರು SIT ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಜನವರಿ 24 ರಿಂದ 28ರ ವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಇವರಿಗೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ತರಬೇತಿ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ ಪ್ರಸನ್ನ.ಕೆ ತಿಳಿಸಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top