ಉಡುಪಿ: ಮಕ್ಕಳ ರಕ್ಷಣಾ ಕಾಯ್ದೆಗಳ ಅನುಷ್ಠಾನ ಕುರಿತು ಕಾರ್ಯಾಗಾರ

Upayuktha
0

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ "ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.


ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ. ಆರ್ ಕಾರ್ಯಕ್ರಮ ಉದ್ಘಾಟಿಸಿದರು.


ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ರಾಮದಾಸ್, ಜಿಲ್ಲೆಯ ವಿವಿಧ ತಾಲೂಕುಗಳ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಪ್ಪಳ ಜಿಲ್ಲೆಯ ಮಕ್ಕಳ ರಕ್ಷಣಾ ಯೋಜನೆ ಯೂನಿಸೆಫ್‍ನ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ್ ರಾಘವೇಂದ್ರ ಭಟ್ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು.


ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಜ್ಯೋತಿ  ವಂದಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top