ಫೆಲೋಶಿಪ್: ಅರ್ಜಿ ಆಹ್ವಾನ

Upayuktha
0


ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‍ಡಿ ಅಧ್ಯಯನ ಪ್ರಾರಂಭಿಸಿರುವ  (2024 ರ ಜನವರಿ 10 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‍ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‍ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಜನವರಿ 20  ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ಅಥವಾ ದೂ. ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣನ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top