ಡಲ್ಲಾಸ್‌ನಲ್ಲಿ ಶ್ರೀಕೃಷ್ಣ ವೃಂದಾವನದ 6ನೆಯ ವಾರ್ಷಿಕೋತ್ಸವ

Upayuktha
0


ಡಲ್ಲಾಸ್: ವಿಶ್ವದಾದ್ಯಂತ ಶ್ರೀ ಕೃಷ್ಣ ಭಕ್ತಿಯ ಶಾಶ್ವತ ಪ್ರಚಾರಕ್ಕಾಗಿ ಪರಮ ಪೂಜ್ಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು  ಅಮೆರಿಕಾದ ಟೆಕ್ಸಾಸ್ ರಾಜ್ಯದ ಡಲ್ಲಾಸ್ ಮಹಾನಗರದಲ್ಲಿ ಸ್ಥಾಪಿಸಿರುವ ಪುತ್ತಿಗೆ ಮಠದ ಆರನೇ ವಾರ್ಷಿಕೋತ್ಸವವು ಶ್ರೀನಿವಾಸ ಕಲ್ಯಾಣ ಮಹೋತ್ಸವದ ಆಚರಣೆಯೊಂದಿಗೆ ವೈಭವದಿಂದ ಸಂಪನ್ನಗೊಂಡಿತು.


ಸಾವಿರಾರು ಮಂದಿ ಭಕ್ತರು ಪಾಲ್ಗೊಂಡ ಈ ಸಂಭ್ರಮದ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಪಾದರು ಆನ್ ಲೈನ್ ಮೂಲಕ ಹರಸಿದರು.


ಇಲ್ಲಿ ಉಡುಪಿ ಶ್ರೀ ಕೃಷ್ಣನ ಮೂರ್ತಿಯನ್ನು ಶ್ರೀಪಾದರು ಇಲ್ಲಿ ಮುಖ್ಯಪ್ರಾಣ ಮತ್ತು ಗುರು ರಾಯರ ಮೃತ್ತಿಕಾ ಬೃಂದಾವನದ ಜೊತೆಗೆ ಸ್ಥಾಪಿಸಿರುವರು.


ವಾರ್ಷಿಕೋತ್ಸವದ ನಿಮಿತ್ತ 108 ಕಲಶಾಭಿಷೇಕ, ಮಹಾಪೂಜೆ, ಶ್ರೀನಿವಾಸ ಕಲ್ಯಾಣ ಮಹೋತ್ಸವ ಮಹಾ ಅನ್ನ ಸಂತರ್ಪಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಂಗಪೂಜೆ, ಉತ್ಸವದ ಜೊತೆಗೆ ಪ್ರಧಾನ ಅರ್ಚಕ ಕುಕ್ಕೆಹಳ್ಳಿ ವಾದಿರಾಜ ಭಟ್ ನೇತೃತ್ವದಲ್ಲಿ ಅನೇಕ ಋತ್ವಿಜರ ಸಹಕಾರದೊಂದಿಗೆ ವೈಭವದಿಂದ ಸಂಪನ್ನಗೊಂಡಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top