ಮಂಗಳೂರು: ಇಂಟರ್ ನ್ಯಾಷನಲ್ ಬಂಟರ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎ. ಸದಾನಂದ ಶೆಟ್ಟಿ ಅವರ ಮಾರ್ಗದರ್ಶನ ದಲ್ಲಿ ನಡೆದ ಬಂಟ್ಸ್ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯಾಟದಲ್ಲಿ ಎಜೆ ಗ್ರೂಪ್ ಪ್ರಶಾಂತ್ ಶೆಟ್ಟಿ ಅವರ ಮಾಲೀಕತ್ವ ಎಜೆ ರಾಯಲ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಅಡ್ವೊಕೇಟ್ ರವೀಂದ್ರನಾಥ ರೈ, ಸಂತೋಷ್ ಶೆಟ್ಟಿ ಮತ್ತು ಅಡ್ವೊಕೇಟ್ ಬಿಪಿನ್ ರೈ ಅವರ ಮಾಲೀಕತ್ವದ ರಾಯಲ್ ಸುರಗಿರಿ ಬಂಟ್ಸ್ ತಂಡ ರನ್ನರ್ಸ್ ಅಪ್ ಆಗಿ ಹೊರಹೊಮ್ಮಿದೆ.
ಶರತ್ ಶೆಟ್ಟಿ ಅವರು ಸರಣಿ ಶ್ರೇಷ್ಠರಾಗಿ (ಮ್ಯಾನ್ ಆಫ್ ದ ಸಿರೀಸ್), ಪ್ರದೀಪ್ ಶೆಟ್ಟಿ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿ, ಅತ್ಯುತ್ತಮ ಬೌಲರ್ ಆಗಿ ಪೃಥ್ವಿರಾಜ್ ಶೆಟ್ಟಿ ಹಾಗೂ ಉದಯೋನ್ಮುಖ ಆಟಗಾರರಾಗಿ ರಕ್ಷತ್ ಶೆಟ್ಟಿ ಆಯ್ಕೆಯಾದರು. ಫೇರ್‍ಪ್ಲೇ ತಂಡವಾಗಿ ಅಡ್ಯಾರ್ ರಾಯಲ್ ಕಿಂಗ್ಸ್ ಹೊರಹೊಮ್ಮಿತು.
ಫೆ. 7, 8, 9ರಂದು ಮೂರು ದಿನಗಳ ಕಾಲ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಪಂದ್ಯಾಟ ನಡೆಯಿತು. ಬಂಟ್ಸ್ ಪ್ರೀಮಿಯರ್ ಲೀಗ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹಾಗೂ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡು ಸಂಘಟಕರನ್ನು ಅಭಿನಂದಿಸಿದರು.
ಹಿರಿಯರಾದ ಡಾ. ಎ. ಸದಾನಂದ ಶೆಟ್ಟಿ ಅವರು, ಬಂಟ್ಸ್ ಪ್ರೀಮಿಯರ್ ಲೀಗ್ ಸೀಸನ್ 2 ಕ್ರೀಡಾಕೂಟ ಅತ್ಯಂತ ಅಚ್ಚುಕಟ್ಟಾಗಿ ನಡೆದಿದೆ. ಇದರಲ್ಲಿ ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿ ರಾಜಗೋಪಾಲ್ ರೈ ಅವರ ಮಾರ್ಗದರ್ಶನ ಕೂಡ ಮಹತ್ವದ ಪಾತ್ರವಹಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಂಟ್ವಾಳದ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಮಾತನಾಡಿ, ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಸುಲಭದ ಕೆಲಸವಲ್ಲ. ಅದನ್ನು ಅತ್ಯಂತ ಯಶಸ್ವಿಯಾಗಿ ಅಚ್ಚುಕಟ್ಟಾಗಿ ಯುವ ಸಂಘಟಕರಾದ ಸಚಿನ್ ರಾಜ್ ರೈ ಮತ್ತು ಪ್ರಸಾದ್ ಶೆಟ್ಟಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮಾತನಾಡಿ, ಬಂಟ ಸಮುದಾಯದ ಯುವಕರು ಇಂತಹ ಸಂಘಟನಾತ್ಮಕ ಕಾರ್ಯಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಹಾರೈಸಿದರು.
ಸಂಜೆ ನಡೆದ ಅದ್ದೂರಿ ವರ್ಣರಂಜಿತ ಸಮಾರಂಭದಲ್ಲಿ ವಿಜೇತ ತಂಡ ಹಾಗೂ ರನ್ನರ್ ಅಪ್ ತಂಡಗಳಿಗೆ ಮತ್ತು ವಿವಿಧ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆಕರ್ಷಕ ಸುಡುಮದ್ದು ಪ್ರದರ್ಶನ, ಹಾಡುಗಳ ಗಾಯನ ಮುಂತಾದ ಕಾರ್ಯಕ್ರಮಗಳು ಒಟ್ಟಾರೆ ಪಂದ್ಯಾಟದ ಕಳೆಯನ್ನು ಹೆಚ್ಚಿಸಿದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ