ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಯಿಂದ ಸರ್ವತೋಮುಖ ಅಭಿವೃದ್ಧಿ

Upayuktha
0


ಉಜಿರೆ: ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಡಾ. ಶಲೀಪ್ ಎ.ಪಿ. ಹೇಳಿದರು. 


ಉಜಿರೆಯ ಎಸ್‌ಡಿಎಂ ಬಿ.ಎಡ್. ಕಾಲೇಜು, ಎಸ್‌ಡಿಎಂ ಡಿ.ಎಡ್ ಕಾಲೇಜು ಹಾಗೂ ಎಸ್‌ಡಿಎಂ ಮಹಿಳಾ ಐಟಿಐ ಕಾಲೇಜುಗಳು ಜ. 28ರಂದು ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.


“ಸ್ಪರ್ಧೆಯಲ್ಲಿ ಸೋಲು- ಗೆಲುವು ಸಾಮಾನ್ಯ. ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಒಂದೇ ರೀತಿಯಲ್ಲಿ ಎರಡನ್ನೂ ಸ್ವೀಕರಿಸಿ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಪೋಷಕರು ನೀಡುವ ಪ್ರೋತ್ಸಾಹಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೆಳೆಯಬೇಕು” ಎಂದು ಅವರು ಸಲಹೆ ನೀಡಿದರು.


ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಚ್. ಅವರು ಮಾತನಾಡಿ, ಆರಂಭದಿಂದಲೂ ಎಸ್‌ಡಿಎಂ ಶಿಕ್ಷಣ ಸಂಸ್ಥೆಯು ಕ್ರೀಡಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡೆಗಳಲ್ಲಿ ಸಾಧನೆ ಮಾಡಲು ಅನುಕೂಲವಾಗಿದೆ ಎಂದರು.


ಎಸ್‌ಡಿಎಂ ಬಿ.ಎಡ್. ಕಾಲೇಜು ಪ್ರಾಂಶುಪಾಲ ಸಂತೋಷ್ ಸಲ್ದಾನ ಸ್ವಾಗತಿಸಿದರು. ಎಸ್‌ಡಿಎಂ ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕಾಮತ್ ವಂದಿಸಿದರು. ಎಸ್‌ಡಿಎಂ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ ಕುಮಾರ್ ಕ್ರೀಡಾಕೂಟ ನಡೆಸಿಕೊಟ್ಟರು.



Post a Comment

0 Comments
Post a Comment (0)
To Top