ದೆಹಲಿ ಬಿಜೆಪಿ ತೆಕ್ಕೆಗೆ-ಬಳ್ಳಾರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

Upayuktha
0


ಬಳ್ಳಾರಿ : ಕಳೆದ 27 ವರ್ಷಗಳ ನಂತರ ದೇಶದ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವ ಹಿನ್ನಲೆಯಲ್ಲಿ ನಗರದ ಗಡಗಿ ಚೆನ್ನಪ್ಪ ಸರ್ಕಲ್‌ನಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಸಿಹಿ ಹಂಚಿ ಸಂಭ್ರಮ ಆಚರಿಸಿದರು. 


ಕಾಂಗ್ರೆಸ್ ಮತ್ತು ಆಮ್ ಆದ್ಮಿ ತಲಾ ಮೂರು ಬಾರಿ ಅಧಿಕಾರ ನಡೆಸಿದ ನಂತರ, ಬಿಜೆಪಿ ದೆಹಲಿಯ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಿದೆ. ಅಲ್ಲದೆ ಆಪ್ ಪಕ್ಷದ ಘಟಾನುಘಟಿಗಳನ್ನು ಮಣಿಸಿದ ಬಿಜೆಪಿ ದೆಹಲಿಯಲ್ಲಿ ಭ್ರಷ್ಟಾಚಾರದ ಸರ್ಕಾರದ ಆಡಳಿತ ಕೊನೆಗೊಂಡಿದೆಂದು ಘೋಷಣೆ ಕೂಗಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸಪಟ್ಟರು. 


ಪಕ್ಷದ ಮುಖಂಡರುಗಳಾದ ಡಾ.ಎಸ್.ಜೆ.ವಿ.ಮಹಿಪಾಲ್, ಎಸ್.ಗುರುಲಿಂಗನಗೌಡ, ಎರ್ರಂಗಳಿ ತಿಮ್ಮಾರೆಡ್ಡಿ, ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು,ಮಾರುತಿ ಪ್ರಸಾದ್, ಹೆಚ್.ಹನುಂಮತಪ್ಪ, ಬಿ.ಶಿವಕುಮಾರ್, ಕೆ.ಎಸ್.ದಿವಾಕರ್,ಹನುಮಂತಪ್ಪ ಕೆ, ಶರಣಕುಮಾರ್ ಮೊದಲಾದವರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top