ಬಳ್ಳಾರಿ: ನಗರದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಎನ್ ಕೃಷ್ಣಮೋಹನ್ ಶೆಟ್ಟಿ ಅವರು ನೇಮಕವಾಗಿದ್ದಾರೆ. ಈ ನೇಮಕಾತಿ ಹುದ್ದೆಯನ್ನು ರಾಜ್ಯಾಧ್ಯಕ್ಷ ಸಿ.ಎನ್.ಅಶೋಕ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಕೃಷ್ಣ ಮೋಹನ್ ಶೆಟ್ಟಿ ಅವರು ಚಲನಚಿತ್ರರಂಗದಲ್ಲಿ ನಿರ್ದೇಶಕರಾಗಿ ಮತ್ತು ನಿರ್ಮಾಪಕರಾಗಿ ಕೆಲಸ ಕಾರ್ಯವನ್ನು ನಿರ್ವಹಿಸುತ್ತಿದ್ದು, ಅಲ್ಲದೆ ವಾಯ್ಸ್ ಆಫ್ ಕೈಗನ್ನಡಿ ಮಾಸಿಕ ಪತ್ರಿಕೆಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ರೈತ ಚಿತ್ರ ಮಾಡಿರುವಂತ ಕೃಷ್ಣನಿಗೆ ಹಲವಾರು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಬಂದಿದ್ದು, ಇಂಥ ಅವಕಾಶಗಳನ್ನು ಪಡೆದುಕೊಂಡ ಕೃಷ್ಣ ಮೋಹನ್ ಅವರು ಮಕ್ಕಳ ಬಗ್ಗೆ ಅಪಾರ ಪ್ರೀತಿ ಅಭಿಮಾನವನ್ನು ಹೊಂದಿರುವಂತ ಕೃಷ್ಣ ಮೋಹನ್ ಅವರು ಜಿಲ್ಲೆಯ ಜನರ ಸೇವೆ ಮಾಡಲು ಬಳ್ಳಾರಿ ಜಿಲ್ಲೆಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಮುಂದಿನ ದಿನಗಳಲ್ಲಿ ಸಮಾಜ ಸೇವೆ ಮಾಡುತ್ತಾ, ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಶಾಲೆಗಳ ಅಭಿವೃದ್ಧಿಯ ಬಗ್ಗೆ ಗಮನಿಸಿ ಸರ್ಕಾರ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕಟ್ಟು ನಿಟ್ಟಿನ ಕೆಲಸ ಮಾಡಲು ಮುನ್ನಡೆಯುತ್ತೇನೆ ಎಂದು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ