ಬಳ್ಳಾರಿ: ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ಗುಗ್ಗರಹಟ್ಟಿಯ 5ನೇ ವಾರ್ಡ್ನಲ್ಲಿರುವ ಜ್ಞಾನ ಸಿರಿ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜ್ ಆವರಣದಲ್ಲಿ 'ಜ್ಞಾನ ಸಿರಿ ಉತ್ಸವ-2025' ಕಾರ್ಯಕ್ರಮ ಫೆ.15 ರಂದು ಸಂಜೆ 5.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜ್ಞಾನ ಸಿರಿ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜ್‌ನ ಉಪ ಪ್ರಾಂಶುಪಾಲ ದೇವರಾಜ್‌ರವರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಖ್ಯಾತ ಚಲನಚಿತ್ರ ಸಾಹಿತಿ ಹಾಗೂ ಸಂಗೀತ ನಿರ್ದೇಶಕರು, ಪ್ರೇಮಲೋಕದ ಜೊತೆ ನಾದ ಲೋಕವನ್ನು ಸೃಷ್ಟಿಸಿದ ಸ್ವರ ಮಾಂತ್ರಿಕ ನಾದ ಬ್ರಹ್ಮ ಡಾ.ಹಂಸಲೇಖರವರು ನೆರವೇರಿಸಲಿದ್ದಾರೆ ಎಂದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಳ್ಳಾರಿ ನಗರ ಶಾಸಕರು ಹಾಗೂ ಯುವ ಮುಖಂಡರೂ ಆದ ನಾರಾ ಭರತ್‌ರೆಡ್ಡಿಯವರು, ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜುರವರು ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಭೇಶ್ವರ ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷರಾದ ಎಸ್.ಎಂ.ದಕ್ಷಿಣಮೂರ್ತಿ ರವರು ವಹಿಸಲಿದ್ದಾರೆ. ವೇದಿಕೆಯಲ್ಲಿ ಜ್ಞಾನ ಸಿರಿ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ಛೇರ್‌ಮನ್ ಎಸ್.ಎಂ.ಶಿವನಾಗ,ಜ್ಞಾನ ಸಿರಿ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಅನನ್ಯ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಚೋಳರಾಜು ರವರು ಭಾವಹಿಸಲಿದ್ದಾರೆ.
ಅಂದಿನ ಕಾರ್ಯಕ್ರಮದಲ್ಲಿ ಡಾ.ಹಂಸಲೇಖರವರ ಗೀತೆಗಳನ್ನು ಅಂತರಾಷ್ಟ್ರೀಯ ಖ್ಯಾತಿಯ ಗಾಯಕರು ಹಾಡಲಿದ್ದು ಮಕ್ಕಳು ಹಾಗೂ ನುರಿತ ನೃತ್ಯಗಾರರಿಂದ ವಿವಿಧ ಹಾಡುಗಳಿಗೆ ನೃತ್ಯ ಪ್ರದರ್ಶನದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳೂ ಜರುಗಲಿವೆ ಎಂದು ಅವರು ತಿಳಿಸಿದ್ದಾರೆ.
ಈ ಪತ್ರಿಕಾಗೋಷ್ಠಿಯಲ್ಲಿ ಜ್ಞಾನ ಸಿರಿ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜ್‌ನ ಛೇರ್‌ಮನ್ ಎಸ್.ಎಂ.ಶಿವನಾಗ ಮತ್ತು ಸದರಿ ಕಾಲೇಜಿನ ಆಡಳಿತಾಧಿಕಾರಿ ಜಾನಕಿರಾಮುಡು ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ