ಬಳ್ಳಾರಿ: ಲೋಕ ಕಲ್ಯಾಣಾರ್ಥ - ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಜನತೆ ಹಾಗೂ ಅಖಂಡ ಬಳ್ಳಾರಿ ಜಿಲ್ಲೆಯ ಜನರ ಒಳಿತಿಗಾಗಿ ಪ್ರಾರ್ಥಿಸಿ ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ದಂಪತಿಗಳು ಉತ್ತರ ಪ್ರದೇಶದ ಪ್ರಯಾಗರಾಜ್'ನ ತ್ರಿವೇಣಿ ಸಂಗಮದಲ್ಲಿ ಗುರುವಾರ ಪುಣ್ಯ ಸ್ನಾನ ಮಾಡಿದರು.
ಪುಣ್ಯ ಸ್ನಾನದ ಸಂದರ್ಭ ರಾಜ್ಯಕ್ಕೆ ದೇಶಕ್ಕೆ ಒಳಿತಾಗಲಿ ಎಂದು ಅವರು ಪ್ರಾರ್ಥಿಸಿದರು. ಈ ವೇಳೆ ಶಾಸಕ ನಾರಾ ಭರತ್ ರೆಡ್ಡಿಯವರ ಧರ್ಮ ಪತ್ನಿ ನಾರಾ ವೈಜಯಂತಿ ರೆಡ್ಡಿ, ಪುತ್ರಿ ನಾರಾ ಆರ್ನಾ ವರಲಿಕಾ ರೆಡ್ಡಿ, ಭಾಮೈದ ರಾಜವರ್ಧನ್ ರೆಡ್ಡಿ ಸೇರಿದಂತೆ ಕುಟುಂಬದ ಸದಸ್ಯರು ಹಾಜರಿದ್ದರು. ಶುಕ್ರವಾರದಂದು ಕಾಶಿಯ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದು, ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ