ಮಾ.08; ರಾಷ್ಟ್ರೀಯ ಲೋಕ ಅದಾಲತ್-ಕೆ.ಜಿ.ಶಾಂತಿ

Upayuktha
0

 



ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾ.08 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.


ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಮಾ.08 ರಂದು ನಡೆಯುವ ಮೆಗಾ-ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಂಡು ತಮ್ಮ ವಿವಾದಗಳನ್ನು ಅಂತ್ಯಗೊಳಿಸಬಹುದು ಎಂದು ಅವರು ತಿಳಿಸಿದ್ದಾರೆ.


ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿವೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಗೆ ಎಂದು ಅವರು  ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top