ಬಳ್ಳಾರಿ: .2023-24ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಬಳ್ಳಾರಿ ಜಿಲ್ಲಾ ಪಂಚಾಯತ್ ಗೆ ‘ನರೇಗಾ ಪ್ರಶಸ್ತಿ’ ಸೇರಿ ಒಟ್ಟು ನಾಲ್ಕು ವಿಭಾಗಗಳಲ್ಲಿ ಪುರಸ್ಕಾರ ಲಭಿಸಿದೆ.
ಪ್ರಶಸ್ತಿ ವಿವರ(ಕಲ್ಬುರ್ಗಿ ವಿಭಾಗ): ಅತ್ಯುತ್ತಮ ಜಿಲ್ಲಾ ಪುರಸ್ಕಾರ- ಬಳ್ಳಾರಿ ಜಿಲ್ಲಾ ಪಂಚಾಯತಿ.ಅತ್ಯುತ್ತಮ ಜಿಲ್ಲಾ ಒಗ್ಗೂಡಿಸುವಿಕೆ ಪುರಸ್ಕಾರ- ಅರಣ್ಯ ಇಲಾಖೆ.ಅತ್ಯುತ್ತಮ ತಾಲ್ಲೂಕು ಪಂಚಾಯಿತಿ ಪುರಸ್ಕಾರ- ಸಂಡೂರು ತಾಲ್ಲೂಕು ಪಂಚಾಯಿತಿ.ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ- ದಮ್ಮೂರು ಗ್ರಾಮ ಪಂಚಾಯಿತಿ, ಕುರುಗೋಡು ತಾಲ್ಲೂಕು.
ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ನರೇಗಾ ಹಬ್ಬ-2025 ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಪ್ರಶಸ್ತಿ ಸ್ವೀಕರಿಸಿದರು.
ಈ ವೇಳೆ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ್ ಕುಮಾರ್ ಮಾಲಪಾಟಿ, ಬಳ್ಳಾರಿ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಹಾಗೂ ಇತರರು ಇದ್ದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ