ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಹೇಮಾ ಶಾಂತಪ್ಪ ಪೂಜಾರಿ ಪುನರಾಯ್ಕೆ

Upayuktha
0



ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದ ಸರ್ವ ಸದಸ್ಯರ ಮಹಾಸಭೆಯಲ್ಲಿ  ಹೇಮಾ ಶಾಂತಪ್ಪ ಪೂಜಾರಿ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ  ಜ್ಯೋತಿ ಗಣೇಶ್‌ಶೆಣೈ ತಿಳಿಸಿದ್ದಾರೆ.


ದಾವಣಗೆರೆಯ ಕಲಾಕುಂಚ ಕಛೇರಿ ಸಭಾಂಗಣದಲ್ಲಿ  ನಡೆದ ಈ ಸಭೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರತೀ ವರ್ಷದಂತೆ ಈ ವರ್ಷವೂ ಮಾರ್ಚ್ 8 ಶನಿವಾರ, 9 ಭಾನುವಾರದಂದು “ದಾವಣಗೆರೆ ಗೃಹಿಣಿ ಸ್ಪರ್ಧೆ” ಹಮ್ಮಿಕೊಳ್ಳಲಾಗಿದೆ ಎಂದು ತೀರ್ಮಾನಿಸಲಾಯಿತು.


ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾಗಿ ವಸಂತಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಲಲಿತಾ ಕಲ್ಲೇಶ್, ಖಜಾಂಚಿಯಾಗಿ ಟಿ. ಮಾಲಾ ಶಿವಣ್ಣ, ಉಪಾಧ್ಯಕ್ಷರಾಗಿ ಗಿರಿಜಮ್ಮ ನಾಗರಾಜಪ್ಪ, ಸಂಘಟನಾ ಕಾರ್ಯದರ್ಶಿಯಾಗಿ ಕುಸುಮಾ ಲೋಕೇಶ್, ಸಂಚಾಲಕರಾಗಿ ಸುಮಾ ಏಕಾಂತಪ್ಪ, ಸಮಿತಿ ಸದಸ್ಯರಾಗಿ ಶೈಲಾ ವಿಜಯ್‌ಕುಮಾರ್, ಪ್ರೇಮಾ ಮಹೇಶ್ವರಯ್ಯ, ಶಿಲ್ಪಾ ಉಮೇಶ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.


ಕಲಾಕುಂಚ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ, ಜಿ.ಬಿ.ಲೋಕೇಶ್, ಎಸ್.ಮಹೇಶ್ವರಯ್ಯ, ವಿಜಯ್‌ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಕಲಾಕುಂಚದ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಸಿ. ಉಮೇಶ್ ಸ್ವಾಗತಿಸಿ, ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top