ದಾವಣಗೆರೆ: ಪರೀಕ್ಷೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಮಹತ್ತರವಾದ ಮೈಲಿಗಲ್ಲು. ಜೀವನದ ಪರೀಕ್ಷೆಯಲ್ಲಿ ಈಜಾಡಿ ಜಯಿಸಬೇಕಾಗಿದೆ. ಪರೀಕ್ಷೆಯ ಸಮಯದಲ್ಲಿ ಮಾನಸಿಕವಾಗಿ, ದೈಹಿಕವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಮನಸ್ಸಿನ ಚಂಚಲತೆಯನ್ನು ಹೋಗಲಾಡಿಸಿ, ಏಕಾಗ್ರತೆಯಿಂದ ಉತ್ತಮ ಫಲಿತಾಂಶ ತಂದಾಗ ಮಕ್ಕಳ ಭವಿಷ್ಯ ಸುಸಂಪನ್ನಗೊಳ್ಳುತ್ತದೆ.
ಮಕ್ಕಳು ಚನ್ನಾಗಿ ಬದ್ದತೆಯಿಂದ ಓದಿ ಅಭ್ಯಾಸ ಮಾಡಿದಾಗ ಹೆದರುವ ಅವಶ್ಯಕತೆ ಇಲ್ಲ. ನಕರಾತ್ಮಕವಾಗಿ ಚಿಂತೆ ಮಾಡದೇ ಸಕಾರಾತ್ಮಕವಾಗಿ ಚಿಂತನೆ ಮಾಡಿದರೆ, ಹೆತ್ತವರ ಕನಸು ನನಸು ಮಾಡಬಹುದು ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ಯವರು ತಮ್ಮ ಅನುಭವದ ಅನಿಸಿಕೆಗಳನ್ನು ಹಂಚಿಕೊಂಡರು.
ದಾವಣಗೆರೆಯ ಪಿ.ಜೆ. ಬಡಾವಣೆಯಲ್ಲಿರುವ ಜೈನ್ ವಿದ್ಯಾಲಯದ ಸಭಾಂಗಣದಲ್ಲಿ ಇತ್ತೀಚೆಗೆ 2024-25ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪರೀಕ್ಷಾ ಪೂರ್ವ ಸಿದ್ಧತಾ ಉಚಿತ ಕಾರ್ಯಾಗಾರವನ್ನು ನಡೆಸಿ ಶಾಲಾ ಶಿಕ್ಷಕ-ಶಿಕ್ಷಕಿಯರ ಅನುಮತಿ ಪಡೆದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಮುಖ್ಯೋಪಾಧ್ಯಾಯನಿ ಸಾಯಿದಾಖಾನ್ ಮಾತನಾಡಿ, ಈ ಪ್ರೌಢಶಾಲಾ ಹಂತ ಜೀವನದ, ಶಿಕ್ಷಣದ ಒಂದು ತಿರುವು. ಈ ಸಮಯದಲ್ಲಿ ಮಕ್ಕಳ ಮುಂದಿನ ದಿವ್ಯ, ಭವ್ಯ ಭವಿಷ್ಯದ ಕುರಿತು ಸಂಕಲ್ಪ ಮಾಡಬೇಕಾಗಿದೆ ಎಂದರು. ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಪ್ರಾರಂಭದಲ್ಲಿ ಸ್ವಾಗತಿಸಿ, ನಿರೂಪಿಸಿ ಕೊನೆಯಲ್ಲಿ ವಂದಿಸಿದರು. ವೇದಿಕೆಯಲ್ಲಿ ಶಾಲೆಯ ಶಿಕ್ಷಕ-ಶಿಕ್ಷಕಿಯರಾದ ವೀಣಾ ಬಿ., ಪದ್ಮಾವತಿ ವಿ., ನಾಗರಾಜ್ ಹೆಚ್. ಅಶೋಕ್ ಆರ್. ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ