ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಿಗೆ ಉತ್ತಮ ಫಲಿತಾಂಶಕ್ಕಾಗಿ ಶುಭ ಹಾರೈಸಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಡದೇ ಬದ್ದತೆಯಿಂದ, ಸಮಯ ಪ್ರಜ್ಞೆಯೊಂದಿಗೆ, ಕರ್ತವ್ಯ ನಿಷ್ಠೆಯೊಂದಿಗೆ ಭಯ ಪಡದೇ ಪರೀಕ್ಷೆ ಎದುರಿಸಿ ಒಳ್ಳೆಯ ಫಲಿತಾಂಶದೊಂದಿಗೆ ಹೆತ್ತ ತಂದೆ-ತಾಯಿಗೆ, ವ್ಯಾಸಂಗ ಮಾಡಿದ ಶಿಕ್ಷಣ ಸಂಸ್ಥೆಗೆ, ಹುಟ್ಟಿದ ಊರಿಗೆ, ಒಳ್ಳೆಯ ಹೆಸರು ತರಬೇಕಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ತಿಳಿಸಿದ್ದಾರೆ.
ಕಲಾಕುಂಚ ಸಂಸ್ಥೆ ಪ್ರತೀ ವರ್ಷದಂತೆ ಈ ವರ್ಷವೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಪರಿಪೂರ್ಣ ಅಂಕಪಡೆದ ಮಕ್ಕಳಿಗೆ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ, 625ಕ್ಕೆ 600ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ.
ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 120ರಿಂದ 124ರವರೆಗೆ ಅಂಕ ಪಡೆದ ಮಕ್ಕಳಿಗೆ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ ``ಕನ್ನಡ-ಕುವರ-ಕುವರಿ‘’ ಜಿಲ್ಲಾ ಪ್ರಶಸ್ತಿ ವಿತರಣೆಯೊಂದಿಗೆ ವೈಭವಪೂರ್ಣವಾಗಿ ವಿಜೃಂಭಣೆಯ ಸಮಾರಂಭ ಜೂನ್ 7 ಶನಿವಾರ, ಜೂನ್ 8 ಭಾನುವಾರ ದಾವಣಗೆರೆಯಲ್ಲಿ ನಡೆಯಲಿದ್ದು ಫಲಿತಾಂಶ ನಂತರ ಪೋಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಮಾಹಿತಿಗೆ 9538732777, 9945785470, 9743897578 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ