ದಾವಣಗೆರೆ:ಚಿತ್ರದುರ್ಗ ಜಿಲ್ಲಾ ಬಂಟರ ಸಂಘ ಮತ್ತು ದಾವಣಗೆರೆಯ ಕರಾವಳಿ ಮಿತ್ರ ಮಂಡಳಿ ಸಂಯುಕ್ತಾಶ್ರಯದಲ್ಲಿ ಮಾರ್ಚ್ 2 ರಂದು ಭಾನುವಾರ ಬೆಳಿಗ್ಗೆ ನಗರದ ಕುಂದುವಾಡ ರಸ್ತೆಯಲ್ಲಿರುವ ಡಾ|| ಶಾಮಸುಂದರ ಶೆಟ್ಟಿ ಬಂಟರ ಭವನದ “ಕರಾವಳಿ ಸೌಧ” ಸಭಾಂಗಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಕರಾವಳಿ ಮಿತ್ರ ಮಂಡಳಿಯ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಯಾವುದೇ ಜಾತಿ, ಮತ ಬೇಧವಿಲ್ಲದೇ ಸಾರ್ವಜನಿಕವಾಗಿ ಯಾರಾದರೂ ಭಾಗವಹಿಸಬಹುದು ಲೋಕ ಕಲ್ಯಾಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತರಾದ ನಾಗರಾಜ್ ಭಟ್‌ರವರ ನೇತೃತ್ವದಲ್ಲಿ ಕರಾವಳಿ ಶೈಲಿಯ ಸಾಂಪ್ರದಾಯಿಕ ಧಾರ್ಮಿಕ, ಆಧ್ಯಾತ್ಮ ಪರಂಪರೆಯ ಈ ಅಪರೂಪದ ಪವಿತ್ರವಾದ ಪೂಜೆಯಲ್ಲಿ ಪಾಲ್ಗೊಳ್ಳುವವರು 9945977433, 8746912345 ಈ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕರಾವಳಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ