ಮಂಗಳೂರು: ದಾವಣಗೆರೆಯ ಸಾಲಿಗ್ರಾಮ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ ದಾವಣಗೆರೆ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವ ಪ್ರಯುಕ್ತ ನೀಡಲಾಗುತ್ತಿರುವ ಸರಸ್ವತಿ ಸಾಧಕ ಸಿರಿ 2025 ನೇ ಸಾಲಿನ ರಾಷ್ಟ್ರಪ್ರಶಸ್ತಿಗೆ ಲೇಖಕ, ಕೃಷಿಕ, ಜೇನು ಕೃಷಿಯ ಪರಿಣತರಾದ ಕುಮಾರ್ ಪೆರ್ನಾಜೆ ಅವರು ಆಯ್ಕೆಯಾಗಿದ್ದಾರೆ.
ಹವ್ಯಕ ಕೃಷಿ ರತ್ನ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕಲಾ ಪೋಷಕ ಕಲಾ ನಿರ್ದೇಶಕ ಶಿಕ್ಷಣ ಪ್ರೇಮಿಯಾಗಿ ಸಾಮಾಜಿಕವಾಗಿ ಗುರುತಿಸಿಕೊಂಡವರು ಅವರು. ಇತ್ತೀಚೆಗೆ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೃಷಿಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸೌಮ್ಯ ಪೆರ್ನಾಜೆ ಅವರನ್ನು ಸಂಗೀತದ ವಿಶೇಷ ಬರಹಕ್ಕೆ, ಹಾಗೂ ಸವಿತಾ ಕೋಡಂದೂರು ಅವರನ್ನು ಸಂಗೀತ ಕ್ಷೇತ್ರದ ಸಾಧನೆಗಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ದಾವಣಗೆರೆ ಚೆನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲ ಕಲ್ಯಾಣ ಮಂಟಪದಲ್ಲಿ ಏ. 27ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

