ಕಾರಂತರ ಕಾದಂಬರಿ ಅಧ್ಯಯನ ಶಿಬಿರ: ಸಮಾರೋಪ ಸಮಾರಂಭ

Upayuktha
0

 


ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಗುರುವಾರ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಿತು. 


ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ, ಸಾಹಿತ್ಯದ ಹಲವು ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದವರು ಕಾರಂತರು. ಅವರ ಬಗೆಗಿನ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. 


ಕಾಲೇಜಿನ ಇಂಗ್ಲೀಷ್‌ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು ಮಾತನಾಡಿದರು. 


ಈ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. 


ಕಾರ್ಯಕ್ರಮದಲ್ಲಿ ಟ್ರಸ್ಟ್‍ನ ಕಾರ್ಯಕ್ರಮದ ಸದಸ್ಯ ಸಂಚಾಲಕ ಜಿ.ಎಂ ಶರೀಫ್, ಬಾರ್ಕೂರಿನ ರುಕ್ಮಿಣಿ ಶೆಡ್ತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ. ಪ್ರಸಾದ್ ರಾವ್, ಕಾಲೇಜಿನ ಇಂಗ್ಲೀಷ್‌ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು  ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top